ಸರ್ಕಾರಿ ಆದರ್ಶ ವಿದ್ಯಾಲಯದ ಮಕ್ಕಳು ವಿಭಾಗ ಮಟ್ಟಕ್ಕೆ ಆಯ್ಕೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ನಾಗಾವಿ ಕ್ಯಾಂಪಸ್ ನ ಸರಕಾರಿ ಆದರ್ಶ ವಿದ್ಯಾಲಯ ಶಾಲೆಯ ಮಕ್ಕಳು 14 ವಯಸ್ಸಿನ ವಿಭಾಗದ ಬಾಲಕಿಯರು ಜಿಲ್ಲಾ ಹಂತದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಗುರು ಸಂತೋಷಕುಮಾರ್ ತಿಳಿಸಿದ್ದಾರೆ.
ಮಕ್ಕಳ ಈ ಸಾಧನೆಗೆ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಚಂದರ್ ಚವ್ಹಾಣ ಹಾಗೂ ದೈಹಿಕ ಶಿಕ್ಷಕಿ ರಮಾಬಾಯಿ, ಜಯಲಕ್ಷ್ಮಿ, ಶಿವರಾಜ್ ಪಾಟೀಲ್ ರವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
