ಚಿತ್ತಾಪುರದಲ್ಲಿ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಹಸೀಲ್ದಾರ್ ಕಚೇರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸೃಜಿಸಿದ 2026 ನೇ ಸಾಲಿನ ಕ್ಯಾಲೆಂಡರ್ ಅನ್ನು ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್ ಹಾಗೂ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಅವರು ಗುರುವಾರ ಬಿಡುಗಡೆ ಮಾಡಿದರು.
ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನಿರ್ದೇಶನದ ಮೇರೆಗೆ ರಾಜ್ಯ ಸಂಘದಿಂದ ತಯ್ಯಾರಿಸಿದ 2026 ನೇ ಸಾಲಿನ ಕ್ಯಾಲೆಂಡರ್ ಅನ್ನು ತಾಲೂಕಿನ ಎಲ್ಲಾ ಇಲಾಖೆಗಳ ನೌಕರರಿಗೆ ವಿತರಿಸಲಾಗುವುದು ಎಂದು ಬಳೂಂಡಗಿ ಹೇಳಿದರು.
ಇದೇ ಸಂದರ್ಭದಲ್ಲಿ ತಾಲೂಕು ಶಾಖೆ ವತಿಯಿಂದ ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್ ಅವರಿಗೆ ಹೊಸ ವರ್ಷದ ಶುಭಾಶಯಗಳು ಕೋರಲಾಯಿತು.
ಈ ಸಂದರ್ಭದಲ್ಲಿ ತಾಪಂ ಸಹಾಯಕ ನಿರ್ದೇಶಕ ಸಂಗಾವಿ, ಉಪ ತಹಸೀಲ್ದಾರ್ ಸುನೀಲ್ ಯನಗುಂಟಿಕರ್, ಮೈನೋದ್ದಿನ್, ಸಂಘದ ಪದಾಧಿಕಾರಿಗಳಾದ ಪರಶುರಾಮ, ಮಕ್ಸುದ್, ಉದಯಶಂಕರ, ಶಿವಾನಂದ ನಾಲವಾರ, ಸಾಬಣ್ಣ, ಸಿದ್ದಪ್ಪ, ರಮೇಶ್, ಅಮೃತ್ ಕ್ಷೀರಸಾಗರ, ಶರಣಪ್ಪ ಐಕೂರ, ರತನಕುಮಾರ, ಅಂಬಣ್ಣ, ಸುನೀಲ್ ಚವ್ಹಾಣ, ಜಯಶ್ರೀ, ಬೇಬಿ ಬಿರಾದಾರ, ಪ್ರಕಾಶ್ ಸೇರಿದಂತೆ ಕಂದಾಯ ಇಲಾಖೆಯ ನೌಕರರು ಉಪಸ್ಥಿತರಿದ್ದರು.

