ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಶೇ.2 ಹೆಚ್ಚಳ ನೌಕರರ ಸಂಘ ಹರ್ಷ: ಬಸವರಾಜ ಬಳೂಂಡಗಿ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: 2024 ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ದರಗಳನ್ನು ಪ್ರಸ್ತುತ ಮೂಲ ವೇತನ ಶೇಕಡಾ 12.25 ರಿಂದ ಶೇಕಡಾ 14.25 ಗೆ ಪರಿಷ್ಕರಿಸಿ ಮಂಜೂರು ನೀಡಿರುವುದಕ್ಕೆ ಮುಖ್ಯಮಂತ್ರಿಗಳಿಗೆ ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಹಾಗೂ ರಾಜಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಅವರು ಧನ್ಯವಾದಗಳು ಸಲ್ಲಿಸಿದ್ದಾರೆ.
ಪತ್ರಿಕಾ ಹೇಳಿಕೆಯೊಂದನ್ನು ನೀಡಿರುವ ರವರು, ಸರ್ಕಾರದ ಮತ್ತು ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿರುವ ಪೂರ್ಣಾವಧಿ ನೌಕರರಿಗೆ ವರ್ಕಚಾರ್ಜ್ ನೌಕರರಿಗೆ ಸರ್ಕಾರದಿಂದ ಸಹಾಯನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಯಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಹಾಗೂ ನಿವೃತ್ತ ನೌಕರುಗಳಿಗೂ ಸಹ ಈ ಆದೇಶಗಳು ಅನ್ವಯಿಸುತ್ತದೆ, ಅದಕ್ಕಾಗಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಪದಾಧಿಕಾರಿಗಳಾದ ಮಹೇಶ ಹೂಗಾರ, ಶ್ರೀಮಂತ ಪಟ್ಟೇದಾರ, ಧರ್ಮರಾಯ ಜವಳಿ, ಸುರೇಶ ಶರ್ಮಾ, ಚಂದ್ರಕಾಂತ ಏರಿ, ಎಂ.ಬಿ ಪಾಟೀಲ, ಸುರೇಶ ವಗ್ಗೆ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

