ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಬಳೂಂಡಗಿ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ವತಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ತಮ್ಮ ಮಕ್ಕಳು ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದವರು ಮೇ.25ರ ಒಳಗಾಗಿ ಆನ್‌ಲೈನ್ ಮೂಲಕ: online link: https://powermedia.info ಸಲ್ಲಿಸಬೇಕು ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು. ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಬಂಧಿಸಿದ ಜಿಲ್ಲಾ/ ತಾಲೂಕಾ ಶಾಖೆಯ ಅಧ್ಯಕ್ಷರ ರುಜು ಮೊಹರಿನೊಂದಿಗೆ ದೃಢೀಕರಿಸಿ ಆನ್‌ಲೈನ್‌ನಲ್ಲಿ ಅಪಲೌಡ್ ಮಾಡಬೇಕೆಂದು ಮನವಿ ಮಾಡಿದ್ದಾರೆ.

