ರಾಜ್ಯ ಸರ್ಕಾರಿ ನೌಕರರಿಗೆ ಶೇ. 1.5 ರಷ್ಟು ತುಟ್ಟಿಭತ್ಯೆ ಹೆಚ್ಚಳ: ಬಳೂಂಡಗಿ ಹರ್ಷ ವ್ಯಕ್ತ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ರಾಜ್ಯದ ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾಗಿದ್ದ ತುಟ್ಟಿಭತ್ಯೆ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಅಧಿಕೃತವಾಗಿ ಅನುಮೋದನೆ ನೀಡಿದ ನಿಮಿತ್ತ ಮೂಲ ವೇತನದ ಶೇ 1.5 ರಷ್ಟು ತಟ್ಟಿಭತ್ಯೆ ಹೆಚ್ಚಳವು ಜನವರಿ-1-2026 ರಿಂದ ಪೂರ್ವಾನ್ವಯವಾಗುವಂತೆ ಇತ್ತೀಚೆಗೆ ಆರ್ಥಿಕ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಹರ್ಷ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಹೇಳಿಕೆಯೊಂದನ್ನು ನೀಡಿರುವ ರವರು, ಸರ್ಕಾರಿ ನೌಕರರ ಸಂಘದ ರಾಜಾಧ್ಯಕ್ಷ ಸಿ.ಎಸ್.ಷಡಾಕ್ಷರಿ ರವರ ನೇತೃತ್ವದ ಪದಾಧಿಕಾರಿಗಳ ನಿಯೋಗ ಡಿ.ಎ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿಗಳಿಗೆ ಬೇಟಿ ನೀಡಿ ಮನವಿ ಮಾಡಿತ್ತು. ಮನವಿಗೆ ಸ್ಪಂದಿಸಿರುವ ಸರ್ಕಾರ ಈ ಮಹತ್ವದ ನಿರ್ಧಾರ ಪ್ರಕಟಿಸಿದ್ದಕ್ಕೆ ಸಂಘವು ಸ್ವಾಗತಿಸುತ್ತಿದೆ. ರಾಜ್ಯ ಸರ್ಕಾರಿ ನೌಕರರ ಹಿತದೃಷ್ಠಿಯಿಂದ ಶೇ. 1.5 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿರುವದು ಸಂತಸದ ವಿಷಯ. ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಮತ್ತು ಸರ್ಕಾರಕ್ಕೆ ಹಾಗೂ ಸಂಘದ ರಾಜಾಧ್ಯಕ್ಷ ಸಿ.ಎಸ್.ಷಡಾಕ್ಷರಿ ರವರಿಗೆ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಮತ್ತು ಸಂಘದ ಪದಾಧಿಕಾರಿಗಳು ಕೃತಜ್ಞತೆಗಳು ಸಲ್ಲಿಸಿದ್ದಾರೆ.

