ವಾಲಿಬಾಲ್ ಕ್ರೀಡೆಯಲ್ಲಿ ಸಾತನೂರು ಗ್ರಾಮದ ಸರಕಾರಿ ಪ್ರೌಢ ಶಾಲೆಯ ಮಕ್ಕಳು ಜಿಲ್ಲೆಗೆ ಪ್ರಥಮ, ಚಿತ್ತಾಪುರಕ್ಕೆ ಕೀರ್ತಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಸಾತನೂರು ಗ್ರಾಮದ ಸರಕಾರಿ ಪ್ರೌಢ ಶಾಲೆಯ ಮಕ್ಕಳು ವಾಲಿಬಾಲ್ ನಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಚಿತ್ತಾಪುರ ತಾಲೂಕಿಗೆ ಕೀರ್ತಿ ತಂದಿದ್ದಾರೆ ಎಂದು ದೈಹಿಕ ಶಿಕ್ಷಕ ದೇವಿಂದ್ರ ದುಗುನೂರ ತಿಳಿಸಿದ್ದಾರೆ.
ವಿದ್ಯಾರ್ಥಿನಿಯರ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಶರಣಪ್ಪ ಮಂಠಾಳೆ, ಎಸ್ಡಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಮಲಬೋ, ರೈತ ಸಂಘದ ಅಧ್ಯಕ್ಷ ಮೌನೇಶ್ ಭಂಕಲಗಿ, ಶಾಲಾ ಶಿಕ್ಷಕರು ಸೇರಿದಂತೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

