ಜು.16 ರಂದು ರಾಜ್ಯ ಮಟ್ಟದ ಪತ್ರಿಕಾ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ | ಪತ್ರಕರ್ತ ಚಿಕ್ಕಮಠಗೆ ಪ್ರತಿಷ್ಠಿತ ಪಾಟೀಲ ಪುಟ್ಟಪ್ಪ ಪ್ರಶಸ್ತಿ

ನಾಗಾವಿ ಎಕ್ಸಪ್ರೆಸ್ 

ಸೇಡಂ: ಮಾಧ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಸುದೀರ್ಘ ಸೇವೆಯನ್ನು ಪರಿಗಣಿಸಿ ಪತ್ರಕರ್ತ ಸಿದ್ದಯ್ಯ ಸ್ವಾಮಿ ಚಿಕ್ಕಮಠ ಆಡಕಿ ಅವರಿಗೆ ರಾಜ್ಯ ಮಟ್ಟದ ಪ್ರತಿಷ್ಠಿತ ಪಾಟೀಲ ಪುಟ್ಟಪ್ಪ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಪತ್ರಿಕೋದ್ಯಮದಲ್ಲಿ ತೋರಿದ ಸುದೀರ್ಘ ಸೇವೆ ಮತ್ತು ಗಣನೀಯ ಸಾಧನೆಗಾಗಿ ಅವರು ಈ ಗೌರವಕ್ಕೆ ಭಾಜನರಾಗಿದ್ದಾರೆ.

ಪತ್ರಕರ್ತರ ವೇದಿಕೆ ಬೆಂಗಳೂರು, ಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು ಹಾಗೂ ಕರ್ನಾಟಕ ಮೀಡಿಯಾ ನ್ಯೂಸ್ ಸೆಂಟರ್ ಬೆಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

ಜುಲೈ 16 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಸಭಾಂಗಣದಲ್ಲಿ ಸಂಜೆ 5.30 ಕ್ಕೆ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಕನ್ನಡ ಪತ್ರಿಕೋದ್ಯಮದ ದಿಗ್ಗಜರಾದ ಪಾಟೀಲ್ ಪುಟ್ಟಪ್ಪನವರ ಹೆಸರಿನಲ್ಲಿ ನೀಡಲಾಗುವ ಈ ಪ್ರಶಸ್ತಿಯು ಅತ್ಯಂತ ಮೌಲ್ಯಯುತವಾಗಿದ್ದು ಸಿದ್ದಯ್ಯ ಸ್ವಾಮಿ ಚಿಕ್ಕಮಠ ಆಡಕಿ ಅವರ ನಿರಂತರ ಮಾಧ್ಯಮ ಸೇವೆಗೆ ಸಂದ ಉನ್ನತ ಗೌರವವಾಗಿದೆ.

Spread the love

Leave a Reply

Your email address will not be published. Required fields are marked *

You missed

error: Content is protected !!