ಸೇಡಂ ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಘಟಕ ಉದ್ಘಾಟನೆ | ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ₹51 ಕೋಟಿಗೂ ಅಧಿಕ ಅನುದಾನ: ಸಚಿವ ಶರಣಪ್ರಕಾಶ ಪಾಟೀಲ

ನಾಗಾವಿ ಎಕ್ಸಪ್ರೆಸ್ 

ಸೇಡಂ: ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಸಿಟಿ ಸ್ಕ್ಯಾನ್ ಕೊಠಡಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಬುಧವಾರ ಉದ್ಘಾಟಿಸಿ, ಸಾರ್ವಜನಿಕರ ಆರೋಗ್ಯ ಸೇವೆಗೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಸೇಡಂ ತಾಲೂಕಿನ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಕಳೆದ ಮೂರು ವರ್ಷಗಳಲ್ಲಿ ₹51 ಕೋಟಿಗೂ ಅಧಿಕ ಅನುದಾನ ಒದಗಿಸುವ ಮೂಲಕ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಸೇಡಂನ ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್ ಕಂಪನಿಯ ಸಹಭಾಗಿತ್ವದಲ್ಲಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸಿಟಿ ಸ್ಕ್ಯಾನ್ ಕೊಠಡಿಯನ್ನು ನಿರ್ಮಿಸಲಾಗಿದೆ. ಅಲ್ಲದೆ, ಸರ್ಕಾರದ ವತಿಯಿಂದ ಅತ್ಯಾಧುನಿಕ ಸಿಟಿ ಸ್ಕ್ಯಾನಿಂಗ್ ಯಂತ್ರವನ್ನು ಒದಗಿಸಲಾಗಿದ್ದು, ಇದರಿಂದ ಸೇಡಂ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿಯೇ ಸುಧಾರಿತ ಆರೋಗ್ಯ ಸೇವೆ ಲಭ್ಯವಾಗಲಿದೆ. ಸಿಟಿ ಸ್ಕ್ಯಾನ್‌ಗಾಗಿ ದೂರದ ನಗರಗಳಿಗೆ ತೆರಳುವ ಅನಿವಾರ್ಯತೆ ಕಡಿಮೆಯಾಗಲಿದೆ ಎಂದರು.

ಈಗಾಗಲೇ ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆಗಾಗಿ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿಎಚ್ಒ ಡಾ.ಸಿದ್ರಾಮಪ್ಪ ಪಾಟೀಲ್, ಸಹಾಯಕ ಆಯುಕ್ತ ಪ್ರಭುರೆಡ್ಡಿ, ಸತೀಶರೆಡ್ಡಿ ಪಾಟೀಲ್, ಶರಣರೆಡ್ಡಿ ಪಾಟೀಲ್, ಡಾ.ಸಂಜೀವಕುಮಾರ ಪಾಟೀಲ್, ಘಟಕ ಮುಖ್ಯಸ್ಥ ಶ್ರೀರಾಮ ಪಿಎಸ್, ಆಡಳಿತ ವೈದ್ಯಧಿಕಾರಿ ಡಾ.ನಾಗರಾಜ ಮನ್ನೆ, ನಗರ ಯೋಜನಾ ಪ್ರಧಿಕಾರ ಅಧ್ಯಕ್ಷ ವಿಶ್ವನಾಥ ಪಾಟೀಲ್ ಬೋಮ್ನಳ್ಳಿ, ಇಂಜಿನಿಯರ್ ಸೋಮಶೇಖರ, ಹಿರಿಯ ಉಪಾಧ್ಯಕ್ಷ ಎಚ್ ಆರ್ ವಿಭಾಗ ಎವಿಎನ್ ಸತೀಶ ಕುಮಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!