ರಾಜ್ಯಾದ್ಯಂತ ಸೆ.20 ರಿಂದ ಶಾಲೆಗಳಿಗೆ ದಸರಾ ರಜೆ ಘೋಷಣೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20 ರಿಂದ ದಸರಾ ರಜೆ ಆರಂಭವಾಗಲಿದೆ. ಅದರಂತೆ ದಸರಾ ರಜೆಗೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7 ರ ವರೆಗೂ ಇರಲಿದೆ, ಒಟ್ಟು 18 ದಿನಗಳು ರಜೆ ಸಿಗಲಿದೆ.
ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
2025-26ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಸೆಪ್ಟೆಂಬರ್ 20ರಿಂದ ಆರಂಭವಾಗಲಿದ್ದು, ಅಕ್ಟೋಬರ್ 7 ರವರೆಗೆ ಇರಲಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 18 ದಿನ ಇರಲಿದೆ.
ಅಕ್ಟೋಬರ್ 8 ರಿಂದ 2 ನೇ ಅವಧಿಯು ಪ್ರಾರಂಭವಾಗಲಿದ್ದು, 2026ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2025- 2026ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

