ಶಹಾಬಾದ ನಗರದಲ್ಲಿ ಮೇ.26 ರಂದು ಅಂಬೇಡ್ಕರ್ ಹಬ್ಬ ಅದ್ದೂರಿ ಆಚರಣೆ
ನಾಗಾವಿ ಎಕ್ಸಪ್ರೆಸ್
ಶಹಾಬಾದ: ಸಂವಿದಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ರವರ 135ನೇ ಜಯಂತ್ಯೋತ್ಸವವನ್ನು ಅಂಬೇಡ್ಕರ್ ಹಬ್ಬ ಎಂದು ಮೇ.26 ರಂದು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ದಲಿತ ಮುಖಂಡ ಮರಿಯಪ್ಪ ಹಳ್ಳಿ ಮತ್ತು ಸಮಿತಿಯ ಅಧ್ಯಕ್ಷ ರಾಜೇಶ ಯನಗುಂಟಿಕರ್ ಅವರು ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 2 ಗಂಟಗೆ ಬಸವೇಶ್ವರರ ವೃತ್ತದಿಂದ ಹೈ ಸ್ಕೂಲ್ ಮೈದಾನದ ವರೆಗೆ (ಡಿ.ಜೆ ಹೊರತು ಪಡಿಸಿ) ಸಾಂಸ್ಕೃತಿಕ ಕಲಾ ತಂಡದಿಂದ ಹಲಗೆ, ಲೇಜಿಮ್, ಕೋಲಾಟ, ಡೊಳ್ಳಿನ ಕುಣಿತ, ಬಂಜಾರ ನೃತ್ಯ ದಂತ ಭವ್ಯವಾದ ಮೆರವಣಿಗೆಯನ್ನು ಡಿವೈಎಸ್ಪಿ ಶಂಕರಗೌಡ ಪಾಟೀಲ ಉಧ್ಘಾಟಿಸುವರು. ನಗರ ಸಭೆ ಪೌರಾಯುಕ್ತ ಫಕ್ರುದ್ದೀನ್ ಸಾಬ್ ಧ್ವಜಾರೋಹಣ ಮಾಡುವರು ಎಂದು ತಿಳಿಸಿದರು.
ಸಮಾರಂಭದ ದಿವ್ಯ ಸಾನಿಧ್ಯವನ್ನು ಅಣದೂರಿನ ಪೂಜ್ಯ ಬಂತೆ ವರಜ್ಯೋತಿ ಮಹಾಥೇರೋ, ಮೈಸೂರಿನ ಪೂಜ್ಯ ಜ್ಞಾನಪ್ರಕಾಶ ಸ್ವಾಮಿಜೀ ವಹಿಸಿಕೊಳ್ಳುವರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಮಾರಂಭವನ್ನು ಉಧ್ಘಾಟಿಸುವರು. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಸಮಾರಂಭದ ಜ್ಯೋತಿ ಬೆಳಗಿಸುವರು. ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ರವರು ಬಾಬಾಸಾಹೇಬರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು. ಮುಖ್ಯ ಭಾಷಣಕಾರರಾಗಿ ಕೆಪಿಸಿಸಿ ಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ನಜ್ಮಾ ನಜೀರ್ ರವರು ಮಾತನಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷ ರಾಜೇಶ ಯನಗುಂಟಿಕರ್ ವಹಿಸಿಕೊಳ್ಳುವರು ಎಂದು ಮಾಹಿತಿ ನೀಡಿದರು.
ಅಥಿತಿಗಳಾಗಿ ರೇವುನಾಯಕ ಬೆಳಮಗಿ, ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಡಾ.ಎಂ.ಎ ರಶೀದ, ಪ್ರವೀಣ ಪಾಟೀಲ, ಮಜರ ಆಲಂ ಖಾನ, ಚಂದ್ರಿಕಾ ಪರಮೇಶ್ವರ, ದೇವಿಂದ್ರಪ್ಪ ಮರತೂರ, ಡಾ.ಡಿ.ಜಿ ಸಾಗರ, ಶಿವಾನಂದ ಪಾಟೀಲ, ಡಾ.ಫಾರೂಕ ಮನ್ನೂರ, ಮರಿಯಪ್ಪ ಹಳ್ಳಿ, ಸುರೇಶ ಮೆಂಗನ್, ತಹಶೀಲ್ದಾರ್ ನೀಲಪ್ರಭಾ ಬಬಲಾದ ಉಪಸ್ಥಿತರಿರುವರು.
ಜಯಂತೋತ್ಸವ ಸಮಾರಂಭಕ್ಕೆ ರಾಜ್ಯದ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಗಣ್ಯರು ಹಾಗೂ ತಾಲೂಕು ಅಧಿಕಾರಿಗಳ ವರ್ಗ ಭಾಗವಹಿಸಲಿದ್ದಾರೆ ಎಂದರು.
ವಿವಿದ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಮತ್ತು ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಗುವದು. ಕಾರಣ ತಾಲೂಕಿನ ಡಾ.ಅಂಬೇಡ್ಕರ ರವರ ಅಭಿಮಾನಿಗಳು, ಮಹಿಳೆಯರು, ವಿಧ್ಯಾರ್ಥಿಗಳು ಜಾತಿ, ಧರ್ಮ ಎನ್ನದೆ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರವೀಣ ರಾಜನ, ಪರಶುರಾಮ ಚಲುವಾದಿ, ಮಲ್ಲಿಕಾರ್ಜುನ ಪೋಲಿಸ್ ಪಾಟೀಲ ಉಪಸ್ಥಿತರಿದ್ದರು.

