ಶಹಾಬಾದ ತಾಲೂಕಿನಲ್ಲಿ ನಕಲಿ ವೈದ್ಯರ ಹಾವಳಿ ತಡೆಗಟ್ಟುವಂತೆ ಆಗ್ರಹಿಸಿ ಕರವೇ ಯಿಂದ ಪ್ರತಿಭಟನೆ
ನಾಗಾವಿ ಎಕ್ಸಪ್ರೆಸ್
ಶಹಾಬಾದ: ತಾಲೂಕಿನಲ್ಲಿ ಮಿತಿಮೀರಿ ಇರುವ ನಕಲಿ ವೈದ್ಯರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಗರದ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ(ನಾರಾಯಣ ಗೌಡ) ಅಧ್ಯಕ್ಷ ಯಲ್ಲಾಲಿಂಗ ಹೈಯ್ಯಾಳಕರ್ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ವೈದ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅಧ್ಯಕ್ಷರು, ಪಟ್ಟಣದಲ್ಲಿ ಕೆಲವು ನಕಲಿ ವೈದ್ಯರು ಮತ್ತು ಕಳಪೆ ಗುಣಮಟ್ಟದ ಔಷಧಗಳ ಮಾರಾಟದ ಹಾವಳಿ ದಿನೇದಿನೆ ಹೆಚ್ಚುತ್ತಿದ್ದು ಇದರಿಂದ ಗ್ರಾಮೀಣ ಪ್ರದೇಶದ ಮುಗ್ಧ ಜನತೆ ಮೋಸ ಹೋಗುತ್ತಿದ್ದಾರೆ ಎಂದು ಹೇಳಿದರು.
ನಕಲಿ ಕ್ಲಿನಿಕ್ ಮತ್ತು ವೈದ್ಯರ ಹಾವಳಿ ಹೆಚ್ಚಾಗಿದ್ದು, ಇದರಿಂದ ಗ್ರಾಮೀಣ ಭಾಗದ ಜನಸಾಮಾನ್ಯರ ಆರೋಗ್ಯದ ಜತೆ ನಕಲಿ ವೈದ್ಯರು ಚೆಲ್ಲಾಟವಾಡುತ್ತಿದ್ದು, ಇಂತಹ ವೈದ್ಯರ ವಿರುದ್ಧ ಕ್ರಮ ಕೈಗೊಂಡು ಜನಸಾಮಾನರ ಆರೋಗ್ಯ ಕಾಪಾಡಬೇಕು ಇಲ್ಲದಿದ್ದರೆ ಮುಂದಿನ ದಿನಮಾನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಚ್ಚರಿಕೆ ನೀಡಿದರು.
ತಾಲೂಕು ಯುವ ಘಟಕದ ಅಧ್ಯಕ್ಷ ಶಿವಕುಮಾರ ದೊರೆ, ಪ್ರಧಾನ ಕಾರ್ಯದರ್ಶಿ ಮಹೇಶ ಹಲಕಟ್ಟಿ, ಉಪಾಧ್ಯಕ್ಷ ಮಹೇಶ ಕಾಂಬ್ಳೆ, ನಗರಾಧ್ಯಕ್ಷ ಪ್ರಸಾದಕುಮಾರ ಮಠಪತಿ, ಭೀಮು, ಗ್ರಾಮ ಘಟಕ ಅಧ್ಯಕ್ಷ ಮಂಜುನಾಥ ಡೊಣಗಾಂವ, ಮೋಹನ, ಸಂಜು ಬಿರಾಳಕರ್, ಅನಿಲಕುಮಾರ, ಅನೀಲ ದೋತ್ರೆ, ಸೋಯಲ್ ಖಾನ್, ಶಶಿಕುಮಾರ ಪೂಜಾರಿ, ಮತೀನ್, ಕೆ.ಜಿ.ಪಾಟೀಲ ಇತರರು ಇದ್ದರು.
ಶಹಾಬಾದ ಸುದ್ದಿ: ನಾಗರಾಜ್ ದಂಡಾವತಿ