ಶಹಾಪುರ ಕಸಾಪ ದಿಂದ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಅಭಿನಂದನಾ ಸಮಾರಂಭ
ನಾಗಾವಿ ಎಕ್ಸಪ್ರೆಸ್
ಶಹಾಪುರ: ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಭವ್ಯ ಸಭಾಂಗಣ ನಿರ್ಮಾಣಕ್ಕೆ ಮೊದಲು ಹಳೆಯ ನಿವೇಶನ ಕಟ್ಟಡಕ್ಕೆ ಹೊಂದಿಕೊಂಡಂತೆ ಹೊಸದಾಗಿ 80/60 ನಿವೇಶನ ಒದಗಿಸಿಕೊಡುವುದರ ಜೊತೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಯೊಂದು ಕಾರ್ಯ ಚಟುವಟಿಕೆಗಳಿಗೆ ಹಾಗೂ ಎಲ್ಲಾ ಸಾಹಿತ್ಯ ಸಮ್ಮೇಳನಗಳಿಗೆ ಮತ್ತು ನಾಡು ನುಡಿಯ ಸಂಸ್ಕೃತಿಗೆ ತನು-ಮನ-ಧನದಿಂದ ಸಹಾಯ, ಸಹಕಾರ, ಪ್ರೋತ್ಸಾಹ ಹಾಗೂ ಮಾರ್ಗದರ್ಶನ ನೀಡುತ್ತಿರುವ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕಸಾಪ ಸಭಾಂಗಣದಲ್ಲಿ ಅಕ್ಟೋಬರ್ 1 ರಂದು ಬೆಳಗ್ಗೆ 10.30ಕ್ಕೆ ಅಭಿನಂದನಾ ಸಮಾರಂಭ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ಡಾ. ರವೀಂದ್ರನಾಥ ಹೊಸಮನಿ ಅವರು ತಿಳಿಸಿದ್ದಾರೆ.
ಯಾದಗಿರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತಿನ ಅಧ್ಯಕ್ಷ ಸಿದ್ಧಪ್ಪ ಹೊಟ್ಟಿ ಹಾಗೂ ನಿಕಟಪೂರ್ವ ತಾಲೂಕ ಕಸಾಪ ಅಧ್ಯಕ್ಷ ಸಿದ್ಧಲಿಂಗಣ್ಣ ಆನೆಗುಂದಿ ಮತ್ತು ಶಹಾಪುರ ತಾಲೂಕಿನ ಎಲ್ಲಾ ವಲಯ ಕಸಾಪ ಅಧ್ಯಕ್ಷರು ಹಾಗೂ ಹಿರಿಯ ಸಾಹಿತಿಗಳು, ಪ್ರಗತಿಪರ ವಿಚಾರವಂತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಅಭಿಮಾನಿಗಳು ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಕೋರಿದ್ದಾರೆ.