ಶಹಾಪುರ ಮತಕ್ಷೇದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
ದೇಶದಲ್ಲಿಯೇ ಅತಿ ಹೆಚ್ಚು ಸದಸ್ಯತ್ವ ಹೊಂದಿದ ಪಕ್ಷ ಬಿಜೆಪಿ: ಯಾಳಗಿ
ನಾಗಾವಿ ಎಕ್ಸಪ್ರೆಸ್
ಶಹಾಪುರ: ಮತಕ್ಷೇತ್ರದಲ್ಲಿ ಬರುವ ಗೋಗಿ ಪೇಠ, ಮುಡಬೂಳ, ಮದ್ದರಕಿ, ಚಂದಾಪೂರ, ಭೋವಿ ಕಾಡಂಗೇರಾ ಮತ್ತು ಕಕ್ಕಸಗೇರಾ ಗ್ರಾಮಗಳಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಭಾನುವಾರ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ ಅವರ ನೇತೃತ್ವದಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಅವರು, ದೇಶದಲ್ಲಿಯೇ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಭಾರತೀಯ ಜನತಾ ಪಕ್ಷವಾಗಿದೆ, ಇದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಇಡೀ ವಿಶ್ವವೇ ಮೆಚ್ಚಿದೆ, ಹೀಗಾಗಿ ಕಾರ್ಯಕರ್ತರು ಎದೆಗುಂದದೆ ಪಕ್ಷದ ಸದಸ್ಯತ್ವ ಹೆಚ್ಚಿನ ಮಟ್ಟದಲ್ಲಿ ಮಾಡುವ ಮೂಲಕ ಸಂಘಟನೆಯ ಭಲ ಹೆಚ್ಚಿಸಬೇಕು ಎಂದು ಅಮೀನ್ ರೆಡ್ಡಿ ಕರೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಕಾರ್ಯಕರ್ತರನ್ನು ಬಿಜೆಪಿ ಸದಸ್ಯರಾಗಿಸಿ ಸದಸ್ಯತ್ವ ನೀಡಲಾಯಿತು. ಹಿರಿಯ ಮುಖಂಡ ಬಸವರಾಜಪ್ಪಗೌಡ ವಿಭೂತಿಹಳ್ಳಿ, ಮಂಡಲ ಅಧ್ಯಕ್ಷ ತಿರುಪತಿ ಹತ್ತಿಕಟಿಗಿ, ನಿಕಟಪೂರ್ವ ಮಂಡಲ ಅಧ್ಯಕ್ಷರಾದ ರಾಜುಗೌಡ ಉಕ್ಕಿನಾಳ, ಜಿಲ್ಲಾ ಕಾರ್ಯದರ್ಶಿ ದಾಮು ಪವಾರ ಹಾಗೂ ಪಕ್ಷದ ಪ್ರಮುಖರು, ಗ್ರಾಮಸ್ಥರು, ಕಾರ್ಯಕರ್ತರು ಉಪಸ್ಥಿತರಿದ್ದರು