ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಂಬಳೇಶ್ವರ ಶ್ರೀ ತೀವ್ರ ಸಂತಾಪ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಂಬಳೇಶ್ವರ ಶ್ರೀ ಸೋಮಶೇಖರ ಶಿವಾಚಾರ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ವೀರಶೈವ ಲಿಂಗಾಯತ ಸಮಾಜದ ಮುಖಂಡರಾಗಿ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿ ಎಲ್ಲರಿಗೂ ಮಾರ್ಗದರ್ಶನ ನೀಡುತ್ತಿದ್ದರು. ಹಲವಾರು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ದೊಡ್ಡ ಮಟ್ಟದ ಕೊಡುಗೆ ನೀಡಿದ್ದರು. ರಾಜ್ಯಕ್ಕೆ, ಕಾಂಗ್ರೆಸ್ ಪಕ್ಷಕ್ಕೆ ಮತ್ತು ವೀರಶೈವ ಲಿಂಗಾಯತ ಸಮಾಜಕ್ಕೆ ಅವರ ಕೊಡುಗೆ ಅನನ್ಯವಾದುದು. ಅವರ ನಿಧನದಿಂದ ಸಮಾಜಕ್ಕೆ ಹಾಗೂ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ.

ಅವರ ಅಗಲಿಕೆಯಿಂದ ಅವರ ಕುಟುಂಬಕ್ಕೆ ಆಗಿರುವ ದುುಃಖದಲ್ಲಿ ನಾನೂ ಭಾಗಿಯಾಗುತ್ತೇನೆ. ಅವರ ಬಂಧುಗಳಿಗೆ, ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!