Oplus_0

ಚಿತ್ತಾಪುರ ಶಿಕ್ಷಣ ಸಂಯೋಜಕ ಶರಣಪ್ಪ ಅಬ್ಬಿಗೇರ್ ಬೀಳ್ಕೊಡುಗೆ ಸಮಾರಂಭ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದಿಂದ ವರ್ಗಾವಣೆಗೊಂಡ ಶಿಕ್ಷಣ ಸಂಯೋಜಕ ಶರಣಪ್ಪ ಅಬ್ಬಿಗೇರ್ ಅವರ ಬೀಳ್ಕೊಡುಗೆ ಸಮಾರಂಭ ಶುಕ್ರವಾರ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಅವರು ಶರಣಪ್ಪ ಅಬ್ಬಿಗೇರ್ ಅವರಿಗೆ ಸನ್ಮಾನಿಸಿ ಬೀಳ್ಕೊಟ್ಟರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶರಣಪ್ಪ ಅಬ್ಬಿಗೇರ್, ಐದು ವರ್ಷ ಹತ್ತು ತಿಂಗಳ ಕಾಲ ಶಿಕ್ಷಣ ಸಂಯೋಜಕ ಹುದ್ದೆ ಯಶಸ್ವಿಯಾಗಿ ನಿಭಾಯಿಸಲು ಸಹಕರಿಸಿದ ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿಗಳಿಗೂ ಹಾಗೂ ಶಿಕ್ಷಕ ವೃಂದದವರಿಗೆ ಧನ್ಯವಾದಗಳು ಸಲ್ಲಿಸಿದರು. ಇಲ್ಲಿ ಸಲ್ಲಿಸಿದ ಸೇವೆ ಅವಿಸ್ಮರಣೀಯ ನಾನು ಎಂದು ಮರೆಯುವಂತಿಲ್ಲ ಎಂದು ತಮ್ಮ ಅನುಭವ ಹಂಚಿಕೊಂಡರು.

ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಾನಂದ ನಾಲವಾರ, ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಶರಣಪ್ಪ ಮಂಠಾಳೆ, ಕಾಶಿರಾಯ ಕಲಾಲ್, ಬಸವರಾಜ ತುಂಬತ್ನಾಳ, ರೇವಣಸಿದ್ದಪ್ಪ ರೋಣದ್, ಸಂತೋಷ ಶಿರನಾಳ, ಪ್ರಕಾಶ್ ಪಾಟೀಲ, ನಾಗರಾಜ ಕುಲಕರ್ಣಿ, ಮನೋಹರ ಹಡಪದ, ಸಾಗರ್ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!