ಶ್ರಾವಣ ಮಾಸದ ನಿಮಿತ್ತ ಜು.26 ರಂದು ಪೂರ್ವಭಾವಿ ಸಭೆ: ನರಿಬೋಳ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಶ್ರಾವಣ ಮಾಸದ ನಿಮಿತ್ತ ಅಖೀಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚಿತ್ತಾಪುರ ತಾಲೂಕು ಘಟಕದ ವತಿಯಿಂದ ಸೇಡಂ ಶಿವಶಂಕರ ಮಠದ ಶ್ರೀ ಶಿವಶಂಕರ ಶಿವಾಚಾರ್ಯರ ಪಾದಪೂಜೆ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಇದೇ ಜು.26 ರಂದು ಬೆಳಿಗ್ಗೆ 10 ಗಂಟೆಗೆ ಕರೆಯಲಾಗಿದೆ ಎಂದು ತಾಲೂಕು ಪ್ರಧಾನ ಕಾರ್ಯದರ್ಶಿ ಆನಂದ ಪಾಟೀಲ್ ನರಿಬೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆದ್ದರಿಂದ ಸಮಾಜ ಬಾಂಧವರು ಹಾಗೂ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

