ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟಣೆ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: 2025ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟಣೆಯಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಹೆಚ್.ಬಸವರಾಜೇಂದ್ರ, ಭಾ.ಆ.ಸೆ ಅವರು ತಿಳಿಸಿದ್ದಾರೆ.
2025ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಪರೀಕ್ಷೆ ಕಳೆದ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಸಲಾಗಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಕಾರಣ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ಮೇ.2 ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಮೇ.2 ರಂದು ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.