ಸಿದ್ದಲಿಂಗ ಬಾಳಿ ಗೆ ಕರ್ನಾಟಕ ಶಿಕ್ಷಣ ರತ್ನ ಪ್ರಶಸ್ತಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಮತಕ್ಷೇತ್ರದ ರಾವೂರ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯ ಸಮಾಜ ವಿಜ್ಞಾನ ಕ್ರಿಯಾಶೀಲ ಶಿಕ್ಷಕ ಸಿದ್ದಲಿಂಗ ಬಾಳಿ ಅವರು ಬೆಂಗಳೂರಿನ ಅನೇಲ್ಪ್ ಗ್ರೂಪ್ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಶಿಕ್ಷಣರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಶಿಕ್ಷಕ ಸಿದ್ದಲಿಂಗ ಬಾಳಿ ಶಿಕ್ಷಣ ಕ್ಷೇತ್ರದಲ್ಲಿ ಕೈಗೊಳ್ಳುತ್ತಿರುವ ವಿನೂತನ ಚಟುವಟಿಕೆಗಳಿಂದ ಈ ಭಾಗದಲ್ಲಿ ಸೃಜನಶೀಲ ಶಿಕ್ಷಕರೆಂದು ಗುರುತಿಸಿಕೊಂಡಿದ್ದಾರೆ. ನಾಳೆ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಸಂಜೆ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ಡಾ. ಸಂತೋಷ ಹೆಗಡೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಸೇರಿದಂತೆ ನಾಡಿನ ಹೆಸರಾಂತ ಚಿತ್ರ ಕಲಾವಿದರು, ಪೂಜ್ಯರು ಉಪಸ್ಥಿತರಿರುವರು ಎಂದು ಸಂಸ್ಥೆಯ ಅಧ್ಯಕ್ಷ ಝಾಕೀರ್ ಹುಸೇನ್ ತಿಳಿಸಿದ್ದಾರೆ.