ಸಿಎಂ ಸಿದ್ದರಾಮಯ್ಯ ಅವರಿಂದ ಸೂಗೂರ.ಎನ್ ಗ್ರಾಮದ ಶ್ರೀ ಭೋಜಲಿಂಗೇಶ್ವರ ಲೋಕಾರ್ಪಣೆ |ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಲು ಕರೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಸೂಗೂರ ಎನ್. ಗ್ರಾಮದ ಶ್ರೀ ಭೋಜಲಿಂಗೇಶ್ವರರ ನೂತನ ದೇವಸ್ಥಾನ ಲೋಕಾರ್ಪಣೆ, ಮೂರ್ತಿ ಪ್ರತಿಷ್ಠಾಪನೆ ಹಾಗೂ ಬೆಳ್ಳಿ ರಥೋತ್ಸವ ಚಾಲನೆ ಹಾಗೂ ಕಲ್ಯಾಣ ಮಂಟಪದ ಉದ್ಘಾಟನೆಯ ಐತಿಹಾಸಿಕ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.11 ರಂದು ಆಗಮಿಸುತ್ತಿರುವ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಬೇಕು ಎಂದು ಕುರುಬ ಸಮಾಜದ ಹಿರಿಯ ಮುಖಂಡ ಜುಮ್ಮಣ್ಣ ಪೂಜಾರಿ ಕರೆ ನೀಡಿದರು.
ಪಟ್ಟಣದ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠ ಸರ್ವ ಜನಾಂಗದ ಮಠವಾಗಿದ್ದು, ಸಾವಿರಾರು ಭಕ್ತರನ್ನು ಹೊಂದಿದ್ದ ಈ ಭಾಗದ ಸುಪ್ರಸಿದ್ಧ ಮಠವಾಗಿದೆ ಎಂದು ಹೇಳಿದರು.
ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿ, ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಭೋಜಲಿಂಗೇಶ್ವರ ನೂತನ ದೇವಸ್ಥಾನ ಲೋಕಾರ್ಪಣೆಗೆ ರಾಜ್ಯದ ಸಿಎಂ ಸಿದ್ದರಾಮಯ್ಯ ಅವರು ಸೂಗೂರ ಎನ್ ಗ್ರಾಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು, ಸಾರ್ವಜನಿಕರು ಭಾಗವಹಿಸಬೇಕೆಂದು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ಅಲ್ಪಸಂಖ್ಯಾತರ ಅಧ್ಯಕ್ಷ ಮುಕ್ತಾರ್ ಪಟೇಲ್, ಪುರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ ಕಾಶಿ, ಪಿಕೆಪಿಎಸ್ ಅಧ್ಯಕ್ಷ ಬಸವರಾಜ ಪೂಜಾರಿ, ಮುಖಂಡರಾದ ಶಿವರಾಜ್ ಕಲಗುರ್ತಿ, ಮನ್ಸೂರ್ ಪಟೇಲ್, ರಸೂಲ್ ಮುಸ್ತಫಾ, ಈರಪ್ಪ ಭೋವಿ, ಶಿವುಕುಮಾರ ಸುಲ್ತಾನಪೂರ, ಮಲ್ಲಿಕಾರ್ಜುನ ಬೆಣ್ಣೂರಕರ್, ಮಲ್ಲಿಕಾರ್ಜುನ ಹಣಿಕೇರಿ, ಶಿವಯೋಗಿ ಸಾಹು ಗುಂಡಗುರ್ತಿ, ಭೋಜು ಶೇರಿ, ಸಂಜಯ್ ಬುಳಕರ್, ಪ್ರದೀಪ್ ಕದ್ದರಗಿ, ದೇವು ನಾಲವಾರ, ಬೀರು ಪೂಜಾರಿ, ನಿಂಗು ಕಡಬೂರ, ನಾಗು ಗಂಗಾಣಿ, ಸೇರಿದಂತೆ ಇತರರು ಇದ್ದರು. ಉದಯಕುಮಾರ್ ಸಾಗರ ಸ್ವಾಗತಿಸಿದರು, ಸಂತೋಷ ಪೂಜಾರಿ ನಿರೂಪಿಸಿದರು.

