ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲಿನ ಅವಮಾನ ಖಂಡನಾರ್ಹ: ಸಂಗಾವಿ

ನಾಗಾವಿ ಎಕ್ಸಪ್ರೆಸ್

ಕಲಬುರಗಿ: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವುದನ್ನು ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಮಹಾಂತಪ್ಪ.ಕೆ.ಸಂಗಾವಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯ ನ್ಯಾಯಮೂರ್ತಿ ಸ್ಥಾನ ಹಾಗೂ ನ್ಯಾಯಾಂಗಕ್ಕೆ ಅಪಮಾನ ಮಾಡಿರುವ ಗುಂಡಾ ವಕೀಲನ ಲೈಸನ್ಸ್‌ನ್ನು ಶಾಶ್ವತವಾಗಿ ರದ್ದುಪಡಿಸಿ, ಕಠಿಣ ಕಾನೂನು ಕ್ರಮ ಜರುಗಿಸಲು ಅವರು ಆಗ್ರಹಿಸಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿದ ಒಬ್ಬ ಪ್ರತಿಭಾವಂತ ಉನ್ನತ ಹುದ್ದೆಯಲ್ಲಿರುವುದನ್ನು ಸಹಿಸದ ಮನುವಾದಿಗಳ ದುಶ್ಕೃತ್ಯಕ್ಕೆ ಮಹಾಂತಪ್ಪ ಸಂಗಾವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!