Oplus_0

ಸೆ.19 ರಂದು ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು ತಾಲೂಕು ಕ್ರೀಡಾಂಗಣದ ವ್ಯವಸ್ಥಾಪಕ ಮರಿಯಪ್ಪ ಬೊಮ್ಮನಳ್ಳಿಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದರಿ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ಬಾಲ್, ಖೋಖೋ, ಕಬ್ಬಡ್ಡಿ, ಥ್ರೋಬಾಲ್, ಯೋಗಾ, ಕ್ರೀಡೆಗಳನ್ನು ಆಯ್ಕೆ ಮಾಡಲಾಗುವುದು.ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸ್ವ-ಇಚ್ಛೆಯಿಂದ ಭಾಗವಹಿಸಬಹುದಾಗಿರುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ನಿವಾಸಿಗಳಾಗಿರಬೇಕು, ರಕ್ಷಣಾ ಪಡೆ, ಅರೆ ರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳಾಗಿರಬಾರದು, ಒಬ್ಬ ಕ್ರೀಡಾಪಟು ಅಥವಾ ತಂಡ ಒಂದು ಬಾರಿ ತಾಲೂಕು, ಜಿಲ್ಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದರೆ ಬೇರೆ ತಾಲೂಕು, ಜಿಲ್ಲಾ ಕ್ರೀಡಾಕೂಟದಲ್ಲಿ ಭಾಗವಹಿಸುವಂತಿಲ್ಲ, ಈ ಕ್ರೀಡಾಕೂಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಗುಂಪು ಕ್ರೀಡೆಯಲ್ಲಿ ಪ್ರಥಮ ತಂಡಗಳು ಜಿಲ್ಲಾ ಮಟ್ಟಕ್ಕೆ ಅರ್ಹರಿರುತ್ತಾರೆ. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಬೇಕು ಹೆಚ್ಚಿನ ಮಾಹಿತಿಗಾಗಿ ಶಿವಶರಣಪ್ಪ ಮಂಠಾಳೆ ಟಿಪಿಒ-7892652212, ಮರಿಯಪ್ಪ -9945230160 ಅವರನ್ನು ಸಂಪರ್ಕಿಸಬಹುದು.

Spread the love

Leave a Reply

Your email address will not be published. Required fields are marked *

You missed

error: Content is protected !!