ಎಸ್ಟಿ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಪ್ರಾಮಾಣಿಕ ಪ್ರಯತ್ನ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ | ವಾಸ್ತವಿಕ ಸತ್ಯ ಅರಿಯದೇ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿರುವುದು ರಾಜಕೀಯ ಪ್ರೇರಿತ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಸರ್ಕಾರದಿಂದ ಅರ್ಹರಿಗೆ ಎಸ್ಟಿ ಜಾತಿ ಪ್ರಮಾಣ ಪತ್ರ ನೀಡಲು ನಮ್ಮ ಸರ್ಕಾರ ಮತ್ತು ನಾನು ಪ್ರಾಮಾಣಿಕ ಪ್ರಯತ್ನ ಮಾಡಿದಾಗಲು ಸಹ ಕೆಲವು ಸಂಘ-ಸಂಸ್ಥೆಗಳು, ಹೋರಾಟಗಾರರು ವಾಸ್ತವಿಕ ಸತ್ಯ ಅರಿಯದೆ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿರುವುದು ನೋಡಿದರೆ ಇದು ರಾಜಕೀಯ ಪ್ರೇರಿತ ಎಂಬುದು ಸ್ಪಷ್ಟವಾಗಿ ಕಂಡುಬರುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ತಳವಾರ ಸಮುದಾಯದವರಿಗೆ ಎಸ್ಟಿ ಜಾತಿ ಪ್ರಮಾಣ ಪತ್ರ ವಿತರಣೆಯಲ್ಲಿ ಇರುವ ಸಮಸ್ಯೆ ಕುರಿತು ನನ್ನ ಹಾಗೂ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಇತರೆ ಹಿರಿಯ ಅಧಿಕಾರಿಗಳ ಉಪಸ್ಥಿಯಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಬೆಳಗಾವಿ ಅಧಿವೇಶನದ ಸಮಯದಲ್ಲಿ ಒಂದು ಸಭೆ ನಡೆದಿದೆ. ಇದಲ್ಲದೆ ಇದೇ ವಿಷಯವಾಗಿ ಬೆಂಗಳೂರಿನಲ್ಲಿ ಮೂರು ಬಾರಿ ಸಭೆ ಸೇರಲಾಗಿದೆ. ಒಟ್ಟಾರೆ ನಾಲ್ಕು ಸಭೆಗಳನ್ನು ನಡೆಸಲಾಗಿ ಸಂಬಂಧಿಸಿದ ಇಲಾಖೆಯಿಂದ ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ಎಸ್ಟಿ ಪ್ರಮಾಣ ಪತ್ರ ವಿತರಿಸಲು ಸ್ಪಷ್ಟ ಸೂಚನೆ ನೀಡಲಾಗಿರುತ್ತದೆ.
ಮುಖ್ಯಮಂತ್ರಿಗಳ ಸಭೆ ನಂತರವೂ ಹೋರಾಟ ಮಾಡುವ ಮುಂಚೂಣಿಯಲ್ಲಿರುವ ನಾಯಕರಿಗೆ ಹಾಗೂ ಸಮಾಜದ ಮುಖಂಡರಿಗೆ ಇಲಾಖೆಯ ಕಾರ್ಯದರ್ಶಿಗಳಿಗೆ 2-3 ಬಾರಿ ಭೇಟಿ ಮಾಡಿಸಿ, ಸಮಾಲೋಚಿಸಿ, ಸಲಹೆ ನೀಡಿದ ನಂತರವೇ ಸರ್ಕಾರಿ ಆದೇಶವನ್ನು ಹೊರಡಿಸಲಾಯಿತು.
ದಿನಾಂಕ: 01.01.2023 ರಿಂದ ಇಲ್ಲಿಯವರೆಗೆ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 14,282 & Naikda (including Parivara and Talawara) ST ನೀಡಲಾಗಿರುತ್ತದೆ. ದಿನಾಂಕ: 01.01.2023 ರಿಂದ ಇಲ್ಲಿಯವರೆಗೆ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 1,624 ಜನರಿಗೆ Talwar_Boya CAT-1 ನಲ್ಲಿ ಜಾತಿ ಪ್ರಮಾಣ ಪತ್ರ ನೀಡಲಾಗಿರುತ್ತದೆ. ದಿನಾಂಕ: 01.03.2020 ರಿಂದ ಇಲ್ಲಿಯವರೆಗೆ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 29,306 & Naikda (including Parivara and Talawara) ST 3 ನೀಡಲಾಗಿರುತ್ತದೆ. ದಿನಾಂಕ: 01.03.2020 ರಿಂದ ಇಲ್ಲಿಯವರೆಗೆ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 12,126 ಜನರಿಗೆ Talwar_Boya CAT-1 ನಲ್ಲಿ ಜಾತಿ ಪ್ರಮಾಣ ಪತ್ರ ನೀಡಲಾಗಿರುತ್ತದೆ.
ಉಚ್ಚ ನ್ಯಾಯಾಲಯ, ಬೆಂಗಳೂರಿನಲ್ಲಿ ರಿಟ್ ಪಿಟಿಷನ್ ನಂ. 13777/2023 ರಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ರದ್ದು ಪಡಿಸುವ ಕುರಿತು ಪ್ರಕರಣ ದಾಖಲಾಗಿರುತ್ತದೆ. ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಲಬುರಗಿ ಜಿಲ್ಲೆಯಲ್ಲಿ 17 ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಸಕ್ಷಮ ಪ್ರಾಧಿಕಾರವಾಗಿರುವ ಸಹಾಯಕ ಆಯುಕ್ತರು ಉಪವಿಭಾಗ ಕಲಬುರಗಿ ಮತ್ತು ಸೇಡಂ ಅವರಿಂದ ರದ್ದುಗೊಳಿಸಲಾಗಿರುತ್ತದೆ.
ಕಲ್ಯಾಣ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕರ ಸಂಘ(ರಿ) ಇವರು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಕೆಲವರು ಸುಳ್ಳು, ಜಾತಿ ಪ್ರಮಾಣ ಪತ್ರ ಪಡೆಯಲು ಪಯತ್ನಿಸುತ್ತಿದ್ದು, ಇದರಿಂದ ನಿಜವಾದ ಪರಿಶಿಷ್ಟ ಪಂಗಡ ಸಮುದಾಯದ ಜನರಿಗೆ ಅನ್ಯಾಯವಾಗುತ್ತಿದೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿರುತ್ತಾರೆ.
ಜಾತಿ ಪ್ರಮಾಣ ಪತ್ರ ಕೋರಿ ಸಲ್ಲಿಕೆಯಾಗುವ ಪ್ರತಿಯೊಂದು ಅರ್ಜಿಯನ್ನು ತಹಸೀಲ್ದಾರರ ಹಂತದಲ್ಲಿ ನಿಯಮಾವಳಿಗಳ ಪ್ರಕಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಈಗಾಗಲೆ ಸ್ಪಷ್ಟವಾದ ಸೂಚನೆ ನೀಡಲಾಗಿರುತ್ತದೆ ಎಂದು ತಿಳಿಸಿದ್ದಾರೆ.

