ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಸಚಿವ ಸ್ಥಾನ ನೀಡಿ ಇಲ್ಲದಿದ್ದರೆ ಬರುವ ಚುನಾವಣೆಯಲ್ಲಿ ತಕ್ಕ ಪಾಠ: ಜಮಾದಾರ್
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಕಾಂಗ್ರೆಸ್ ಪಕ್ಷದ ಕೋಲಿ ಸಮಾಜದ ಏಕೈಕ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಸಚಿವ ಸ್ಥಾನ ನೀಡಬೇಕು ಇಲ್ಲದಿದ್ದರೆ ಬರುವ ಎಲ್ಲಾ ಚುನಾವಣೆಗಳಲ್ಲಿ ಕೋಲಿ ಕಬ್ಬಲಿಗ ಸಮಾಜದಿಂದ ತಕ್ಕ ಪಾಠ ಕಲಿಸಲಾಗುವುದು ಎಂದು ಜೈ ಕರುನಾಡು ಜನಪರ ಸಮಿತಿ ರಾಜ್ಯಾಧ್ಯಕ್ಷ ಸಿದ್ದು (ಗೌತಮ್) ಹೆಚ್. ಜಮಾದಾರ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೋಲಿ -ಕಬ್ಬಲಿಗ ಸಮಾಜ ಹೊರತು ಪಡಿಸಿ ಎಲ್ಲಾ ಸಮುದಾಯದವರಿಗೆ, ಜಾತಿಯವರಿಗೆ ಸಚಿವ ಸ್ಥಾನ ನೀಡಲಾಗಿದೆ, ಆದರೆ ಕೋಲಿ -ಕಬ್ಬಲಿಗ ಸಮಾಜದ ರಾಜ್ಯ ಹಿರಿಯ ಮುಖಂಡರು, ಕೋಲಿ ಸಮಾಜದ ಒಳಿತಿಗಾಗಿ, ಕೋಲಿ ಸಮಾಜದ ಧ್ವನಿಯಾಗಿ ವಿಧಾನ ಪರಿಷತ್ತಿನಲ್ಲಿ ಸಮಾಜದ ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಧ್ವನಿ ಎತ್ತುತ್ತಿರುವ ಏಕೈಕ ನಾಯಕ ತಿಪ್ಪಣ್ಣಪ್ಪ ಕಮಕನೂರ ರವರಿಗೆ ಖಾಲಿ ಇರುವ ಒಂದು ಸಚಿವ ಸ್ಥಾನಕ್ಕೆ ನೇಮಕ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ತಿಪ್ಪಣ್ಣಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಕರ್ನಾಟಕ ರಾಜ್ಯದ ಕೋಲಿ-ಕಬ್ಬಲಿಗ ಸಮಾಜದ ಜನರ ಪ್ರಬಲ ಬೇಡಿಕೆಯಾಗಿದೆ. ಇದನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ರಾಜ್ಯಸಭಾ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯದ ಸಮಸ್ತ ಕೋಲಿ-ಕಬ್ಬಲಿಗ ಸಮಾಜದ ವತಿಯಿಂದ ಮನವಿ ಮಾಡಿದ್ದಾರೆ.

