ಕೇಂದ್ರ ಬಿಜೆಪಿ ಸರ್ಕಾರ ತೊಗರಿ ಬೆಳೆ ಬೆಂಬಲ ಬೆಲೆಗೆ ಖರೀದಿಗೆ ಅನುಮೋದನೆ: ಅನ್ನಪುರ ಹರ್ಷ
ನಾಗಾವಿ ಎಕ್ಸಪ್ರೆಸ್
ಯಾದಗಿರಿ: ಕೇಂದ್ರದಲ್ಲಿ ಕರ್ನಾಟಕದ ಹಾಗೂ ಕನ್ನಡಿಗರ ಪ್ರತಿನಿಧಿ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ನವೀಕರಣ ಇಂಧನ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರ ನಿರಂತರ ಪ್ರಯತ್ನದಿಂದ ಕರ್ನಾಟಕದಲ್ಲಿ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಬೇಳೆಯನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ (MSP) ನಫೆಡ್ (NAFED) ಮತ್ತು ಎನ್‌ಸಿಸಿಎಫ್ (NCCF) ಮೂಲಕ ಆದ್ಯತೆಯ ಮೇಲೆ ಖರೀದಿ ಮಾಡಲು ಶೀಘ್ರವಾಗಿ ಅನುಮೋದನೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರಿಗೆ ರಾಜ್ಯ ಬಿಜೆಪಿ ಕಾರ್ಯದರ್ಶಿ, ನಗರಸಭೆ ಅಧ್ಯಕ್ಷೆ ಲಲಿತಾ ಅನ್ನಪುರ ಹರ್ಷ ವ್ಯಕ್ತಪಡಿಸಿ ಕೃತಜ್ಞತೆಗಳು ಸಲ್ಲಿಸಿದ್ದಾರೆ.
ಪ್ರಹ್ಲಾದ್ ಜೋಶಿ ಅವರ ಕಲ್ಯಾಣ ಕರ್ನಾಟಕದ ರೈತರ ಹಿತಾಸಕ್ತಿ ಕಾಪಾಡುವುದು, ರೈತರನ್ನು ಸಶಕ್ತಗೊಳಿಸುವುದರ ಬಗ್ಗೆ ಇರುವ ಅಪಾರವಾದ ಕಾಳಜಿಗೆ ಹೃದಯ ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

