ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಮತಗಳ ಅಂತದರಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ಕಲಬುರಗಿಯಲ್ಲಿ ಗುರುವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಅವರ ಸಮಾಜಿಕ ಹಾಗೂ ಜನಪರ ಕೆಲಸಗಳು ಸಮರ್ಥ ಅವರು ಗೆಲ್ಲಲಿದ್ದಾರೆ. ಹಾಗೆ ಬಾಗಲಕೋಟೆಯಲ್ಲಿ ಮೇಟಿ ಅವರು ಗೆಲ್ಲಲಿದ್ದಾರೆ ಎಂದರು.
ನಮಗೆ ಇರುವ ಮಾಹಿತಿ ಪ್ರಕಾರ ಹಾಗೂ ಮಾಧ್ಯಮಗಳ ವರದಿಗಳ ಪ್ರಕಾರ, ಎರಡೂ ಕ್ಷೇತ್ರಗಳಲ್ಲಿ ನಾವು ಗೆಲುವು ಸಾಧಿಸಲಿದ್ದೇವೆ ಎಂದು ಪುನರುಚ್ಚರಿಸಿದರು.
ಏ.11 ರಂದು ಸೂಗೂರ ಎನ್.ಗ್ರಾಮಕ್ಕೆ ಸಿಎಂ ಆಗಮನ:
ಏಪ್ರಿಲ್ 11 ರಂದು ಸಿಎಂ ಸಿದ್ದರಾಮಯ್ಯ ನವರು ಬೀದರ್ ನಲ್ಲಿ ನಡೆಯಲಿರುವ ಪತ್ರಕರ್ತರ ಸಮ್ಮೇಳನದಲ್ಲಿ ಬಾಗವಹಿಸಿ ನಂತರ ಚಿತ್ತಾಪುರ ತಾಲೂಕಿನ ಸೂಗೂರ ಎನ್. ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ದೇವಾಲಯ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಇದೇ ಸಂದರ್ಭದಲ್ಲಿ ತಿಳಿಸಿದರು.
