Oplus_0

ಚಿತ್ತಾಪುರ ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ವಸತಿ ನಿಲಯದ ಅಡಿಗಲ್ಲು | ಬಸವ ಭವನ, ವಸತಿ ನಿಲಯ ಬರುವ ವರ್ಷದಲ್ಲಿ ಉದ್ಘಾಟನೆ: ನಾಗರೆಡ್ಡಿ ಪಾಟೀಲ 

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಬಸವ ಭವನ ಹಾಗೂ ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ವಸತಿ ನಿಲಯದ ಕಾಮಗಾರಿಗಳಿಗೆ  ಬಸವ ಜಯಂತಿ ದಿನದಂದು ಅಡಿಗಲ್ಲು ಹಾಕಲಾಗಿದ್ದು, ಬರುವ ವರ್ಷದಲ್ಲಿ ಉದ್ಘಾಟನೆ ಮಾಡಲಾಗುವುದು ಹೀಗಾಗಿ ಎಲ್ಲರೂ ಸಹಕರಿಸಬೇಕು ಎಂದು ಶ್ರೀ ಬಸವೇಶ್ವರ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ನಾಗರೆಡ್ಡಿ ಪಾಟೀಲ ಕರದಾಳ ಮನವಿ ಮಾಡಿದರು.

ಪಟ್ಟಣದ ರಾವೂರ ರಸ್ತೆಯ ಬಸವ ಭವನ ನಿಯೋಜಿತ ಸ್ಥಳದಲ್ಲಿ ಶ್ರೀ ಬಸವೇಶ್ವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ವಸತಿ ನಿಲಯದ ಅಡಿಗಲ್ಲು ಸಮಾರಂಭದಲ್ಲಿ ಮಾತನಾಡಿದ ಅವರು, ಈಗಾಗಲೇ ವಸತಿ ನಿಲಯದ ಹತ್ತು ಕೋಣೆಗಳ ನಿರ್ಮಾಣಕ್ಕೆ ದೇಣಿಗೆ ನೀಡಿದವರ ಹೆಸರು ಇಡಲಾಗುವುದು ಎಂದು ಹೇಳಲಾಗಿತ್ತು, ಅದರಂತೆ ಹತ್ತು ಜನ ದಾನಿಗಳು ಹೆಸರು ನೋಂದಾಯಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಬಸವ ಭವನದ ಕಾಮಗಾರಿಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಬಸವ ಜಯಂತಿ ದಿನದಂದು ವಸತಿ ನಿಲಯಕ್ಕೆ ಅಡಿಗಲ್ಲು ಹಾಕಲಾಗಿದೆ ಎಂದರು. ದೇಣಿಗೆ ನೀಡಿದ ದಾನಿಗಳನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಕೆಲ ದಿನಗಳಲ್ಲಿ ಆಯೋಜಿಸಲಾಗುವುದು ಎಂದು ಹೇಳಿದರು.

ಕಂಬಳೇಶ್ವರ ಶ್ರೀ ಸೋಮಶೇಖರ ಶಿವಾಚಾರ್ಯರು ಅಡಿಗಲ್ಲು ನೆರವೇರಿಸಿ ಮಾತನಾಡಿದ ಅವರು, ಚಿತ್ತಾಪುರದಲ್ಲಿ ನಿರ್ಮಾಣವಾಗುತ್ತಿರುವ ಬಸವ ಭವನ ಹಾಗೂ ವಿದ್ಯಾರ್ಥಿ ವಸತಿ ನಿಲಯ ಕಟ್ಟಡಗಳು ಬರುವ ದಿನಗಳಲ್ಲಿ ಜಿಲ್ಲೆಯಲ್ಲಿಯೇ ಕಂಗೋಳಿಸಲಿವೆ, ಇದೊಂದು ಸಮಾಜಮುಖಿ ಕಾರ್ಯ ಎಲ್ಲರೂ ಸಹಕರಿಸಬೇಕು ಎಂದು ಕರೆ ನೀಡಿದರು.

ಹುಟ್ಟು ಸಾವಿನ ನಡುವೆ ಬದುಕು ಅನ್ನುವುದಿದೆ. ಇದೊಂದು ಅದ್ಬುತ ಅವಕಾಶ, ಅಲ್ಪ ಜೀವಿತಾವಧಿಯಲ್ಲಿ ಸಮಾಜದ ಸಲುವಾಗಿ ಉತ್ತಮ ಕಾರ್ಯಗಳನ್ನು ಮಾಡುವ ಮೂಲಕ ಶ್ರೇಷ್ಠ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಹೇಳಿದರು.

ಮುಖಂಡರಾದ ಡಾ.ಪ್ರಭುರಾಜ ಕಾಂತಾ, ಅಣ್ಣಾರಾವ್ ಪಾಟೀಲ ಮುಡಬೂಳ, ಚಂದ್ರಶೇಖರ ಸಾತನೂರ, ಅಶೋಕ ನಿಪ್ಪಾಣಿ, ಮಲ್ಲಿಕಾರ್ಜುನರೆಡ್ಡಿ ಇಜಾರ, ಚಂದ್ರುಗೌಡ ಬೆಳಗುಂಪಾ, ಎಸ್.ಎನ್.ಪಾಟೀಲ, ಶಾಂತಕುಮಾರ್ ಹತ್ತಿ, ಪ್ರಭು ಬೊಮ್ಮನಳ್ಳಿ, ಶ್ರೀನಿವಾಸರೆಡ್ಡಿ ಪಾಲಪ್, ರಮೇಶ್ ಬೊಮ್ಮನಳ್ಳಿ, ಸುವನರೆಡ್ಡಿ, ಶಿವರೆಡ್ಡಿ ಪಾಲಪ್, ಬಸವರಾಜ ಸಂಕನೂರ, ಬಸವರಾಜ ಕಾಳಗಿ, ಬಸವರಾಜ ಹೂಗಾರ, ರಾಚಪ್ಪ ಬೊಮ್ಮನಳ್ಳಿ, ವಿಶ್ವಾರಾಧ್ಯ ಪಾಟೀಲ ಕರದಾಳ, ನೀಲಕಂಠ ಕರದಾಳ, ಶಿವುಕುಮಾರ ದಿವಾನ, ಮಲ್ಲಿಕಾರ್ಜುನ ಪಡಶೆಟ್ಟಿ, ಆನಂದ ಪೇಂಟರ್, ಶಿವುಕುಮಾರ ಶೀಲವಂತ ಸೇರಿದಂತೆ ಇತರರು ಇದ್ದರು.

ಟ್ರಸ್ಟ್ ಕಾರ್ಯದರ್ಶಿ ನಾಗರಾಜ ಭಂಕಲಗಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಅಂಬರೀಷ್ ಸುಲೇಗಾಂವ ನಿರೂಪಿಸಿದರು, ಅನಿಲ್ ವಡ್ಡಡಗಿ ವಂದಿಸಿದರು.

Spread the love

Leave a Reply

Your email address will not be published. Required fields are marked *

You missed

error: Content is protected !!