ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮೆಟ್ರೋ‌ ಪ್ರಯಾಣ ಬಗ್ಗೆ‌ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ನಾಗಾವಿ ಎಕ್ಸಪ್ರೆಸ್ 

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮೆಟ್ರೋ ಹತ್ತಿರುವ ಬಗ್ಗೆ ಮಾದ್ಯಮಗಳು ಪದೇ ಪದೇ ಸುದ್ದಿ ಬಿತ್ತರಿಸುತ್ತಿವೆ. ಆದರೆ,‌ ಈ ಪರಿಸ್ಥಿತಿಗೆ ಯಾರು ಕಾರಣ ಎಂದು ಯಾಕೆ ಕೇಳುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು‌ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು.

ಮಾಡಬೂಳ ಗ್ರಾಮದ ಬಳಿ ನಿರ್ಮಾಣವಾಗಿರುವ ನೂತನ ಮೃಗಾಲಯ ಉದ್ಘಾಟನೆ ನೆರವೇರಿಸಿದ‌ ನಂತರದ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು.

ಮೋದಿ ವಿದೇಶದಿಂದ ತಂದ ಪ್ರಾಣಿಗಳು ಸತ್ತು ಹೋದವು. ಈಗ ನಾವು ತರುವ ಪ್ರಾಣಿಗಳನ್ನು ಸರಿಯಾಗಿ‌ ನಿರ್ವಹಣೆ ಮಾಡಿ ಸಂರಕ್ಷಿಸಲಾಗುವುದು ಎಂದು ಪ್ರಿಯಾಂಕ್ ಹೇಳಿದರು.

ದೇಶ ಕಷ್ಟದ ಸ್ಥಿತಿಯಲ್ಲಿದ್ದಾಗ ಮೋದಿ ವಿದೇಶಕ್ಕೆ ಹೋಗುತ್ತಾರೆ. ಆರ್ಥಿಕ‌ ಸ್ಥಿತಿಗತಿ, ಪೆಟ್ರೊಲಿಯಂ ಬೆಲೆ ಏರಿಕೆ ಬಗ್ಗೆ ಸಂಸತ್ತಿನಲ್ಲೇ ಹೇಳಬೇಕಿತ್ತು‌ ನೆದರ್ ಲ್ಯಾಂಡ್ಸ್ ಗೆ ಯಾಕೆ‌ ಹೋಗಬೇಕಿತ್ತು ಎಂದು‌ ಖರ್ಗೆ ಕುಟುಕಿದರು.

ಬೆಲೆ ಏರಿಕೆ ವಿಷಯ ಮರೆಮಾಚಲು ಮೋದಿ ಚಿನ್ನ ಖರೀದಿ ಮಾಡಬೇಡಿ ಎಂದು ಜನರಿಗೆ ಕರೆ ಕೊಡುತ್ತಾರೆ. ನೀಟ್ ಅಕ್ರಮ ಬಗ್ಗೆ ಮೋದಿ ಯಾಕೆ ಮಾತನಾಡುವುದಿಲ್ಲ. 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ. ಇದಕ್ಕೆ‌ ಯಾರು ಕಾರಣ? ಸಚಿವ ಧರ್ಮೆಂದ್ರ ಪ್ರಧಾನ್ ಅವರನ್ನ ಇನ್ನೂ‌ ಸಚಿವರಾಗಿ ಮುಂದುವರೆಸಿದ್ದಾರೆ‌ ಯಾಕೆ? ಎಂದು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ, ಶಾಸಕರಾದ ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ಜಗದೇವ ಗುತ್ತೇದಾರ, ಜಿಲ್ಲಾಧಿಕಾರಿ ಮಹ್ಮದ್ ಇಕ್ರಾಮುಲ್ಲಾ ಶರೀಫ್, ಎಸ್ಪಿ ಅಡ್ಡೂರು ಶ್ರೀನಿವಾಸಲು, ಜಿಪಂ ಸಿಇಒ ಭಂವರಸಿಂಗ್ ಮೀನಾ, ಕೆಕೆಆರ್’ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ, ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಸುನೀಲ್ ದೊಡ್ಡಮನಿ, ಜಿಪಂ ಮಾಜಿ ಸದಸ್ಯ ಶಿವಾನಂದ ಪಾಟೀಲ, ಶರಣಕುಮಾರ ಮೋದಿ, ಜಯಪ್ರಕಾಶ್ ಕಮಕನೂರ, ವೀರುಪಾಕ್ಷಪ್ಪ ಗಡ್ಡದ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!