ಬೇಡಿಕೆ ಈಡೇರಿಕೆಗಾಗಿ ಪ್ರಾಮಾಣಿಕ ಪ್ರಯತ್ನ: ವಿಕಲಚೇತರಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ನಾಗಾವಿ ಎಕ್ಸಪ್ರೆಸ್

ಕಲಬುರಗಿ ವಿಕಲಚೇತನ ಪುನರ್ವಸತಿ ಕಾರ್ಯಕರ್ತರಿಗೆ ಕನಿಷ್ಠ ವೇತನ ಜಾರಿಗೊಳಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆ ಆಲಿಸಿದರು.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಕಳೆದ 17 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ 6500ಕ್ಕೂ ಅಧಿಕ ವಿಕಲಚೇತನ ಪುನರ್ವಸತಿ ಕಾರ್ಯಕರ್ತರು ಅತ್ಯಂತ ಕಡಿಮೆ ಗೌರವ ಧನ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ಈ ವಿಕಲಚೇತನ ಕಾರ್ಯಕರ್ತರಿಗೆ ಕನಿಷ್ಠ ವೇತನ ನಿಗದಿಪಡಿಸುವಂತೆ ಪ್ರತಿಭಟನಾಕರರು ಸಚಿವರಿಗೆ ಮನವಿ ಸಲ್ಲಿಸಿದರು.

ಆಗ ಮಾತನಾಡಿದ ಸಚಿವರು, ಸಮಸ್ಯೆಯ ಬಗ್ಗೆ  ಸಂಪೂರ್ಣ ಮಾಹಿತಿ ಕೇಳಿ ಸಂಬಂಧಪಟ್ಟ ಸಚಿವರಿಗೆ ದೂರವಾಣಿ ಮೂಲಕ ಮಾತನಾಡಿದರು.

ಸಮಸ್ಯೆ ಬಗೆಹರಿಸಿ ಬೇಡಿಕೆ ಈಡೇರಿಕೆಗೆ ಅಗತ್ಯ ಕ್ರಮವಹಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಚಿವರು ಭರವಸೆ ನೀಡಿದರು.

Spread the love

Leave a Reply

Your email address will not be published. Required fields are marked *

error: Content is protected !!