Oplus_0

ವಾಡಿ ಸಿಮೆಂಟ್ ಕಂಪೆನಿಯಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಿರುವ ಮಾಹಿತಿ ನೀಡುವಂತೆ ಆಡಳಿತ ಮಂಡಳಿಗೆ ಕರವೇ ಮನವಿ 

ನಾಗಾವಿ ಎಕ್ಸಪ್ರೆಸ್

ವಾಡಿ: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ಆದೇಶ ಹಾಗೂ ಮಾರ್ಗದರ್ಶನದಂತೆ, ಶನಿವಾರ ಕಲಬುರಗಿ ಜಿಲ್ಲಾಧ್ಯಕ್ಷ ಆನಂದ್ ದೊಡ್ಡಮನಿ ಅವರ ನೇತೃತ್ವದಲ್ಲಿ ಚಿತ್ತಾಪುರ ತಾಲೂಕಿನಲ್ಲಿ ಕನ್ನಡಿಗರ ಉದ್ಯೋಗಕ್ಕಾಗಿ ಆಗ್ರಹ ಅಭಿಯಾನ ನಡೆಸಲಾಯಿತು.

ಈ ಸಂದರ್ಭದಲ್ಲಿ ವಾಡಿ ಸಿಮೆಂಟ್ ಕಾರ್ಖಾನೆಗಳಿಗೆ ಭೇಟಿ ನೀಡಿ, ಕನ್ನಡಿಗರಿಗೆ ಉದ್ಯೋಗ ಕಲ್ಪಿಸಿರುವ ಕುರಿತು ಅಧಿಕೃತ ಮಾಹಿತಿ ನೀಡುವಂತೆ ಆಡಳಿತ ಮಂಡಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಕವಿತಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕಟ್ಟಿಮನಿ, ಎಲ್ಲಾ ತಾಲೂಕು ಅಧ್ಯಕ್ಷರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು,ವಾಡಿ ಘಟಕ ಅಧ್ಯಕ್ಷ ಶಿವುಕುಮಾರ್ ಗುತ್ತೇದಾರ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!