Oplus_0

ವಾಡಿ ಬಿಜೆಪಿ ಕಚೇರಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನಾಚರಣೆ

ನಾಗಾವಿ ಎಕ್ಸಪ್ರೆಸ್

ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾರತ ಸಂವಿಧಾನದ ಶಿಲ್ಪಿ  ಬಾಬಾ ಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಮುಖಂಡರು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಭಾರತ ರತ್ನ ಡಾ.ಅಂಬೇಡ್ಕರ್ ಅವರ ಆಲೋಚನೆ ಮತ್ತು ಅಭಿಪ್ರಾಯಗಳು ಲಕ್ಷಾಂತರ ಜನರಿಗೆ ಶಕ್ತಿ ನೀಡುತ್ತದೆ. ನಮ್ಮ ದೇಶದ ಬಗ್ಗೆ ಇಟ್ಟಿದ ಅವರ ಕನಸನ್ನು ಈಡೇರಿಸಲು ನಮ್ಮ ಬದುಕು ಮುಡುಪಾಗಿಡುವುದು ನಮ್ಮ ಕರ್ತವ್ಯ ಎಂದರು.

ಡಾ ಬಿ.ಆರ್. ಅಂಬೇಡ್ಕರ್ ಅವರು ನಿಧನ ಹೊಂದಿದ ದಿನ ಪ್ರತಿವರ್ಷ ಡಿಸೆಂಬರ್ 6ನ್ನು ಮಹಾ ಪರಿನಿರ್ವಾಣ ದಿವಸವೆಂದು ಆಚರಿಸುತ್ತೇವೆ. ಭಾರತ ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರು ಒಬ್ಬ ಖ್ಯಾತ ನ್ಯಾಯವಾದಿಗಳು, ಆರ್ಥಿಕ ತಜ್ಞರು, ರಾಜಕೀಯ ಮತ್ತು ಸಮಾಜ ಸುಧಾರಕರಾಗಿ ಕೂಡ ಗುರುತಿಸಿಕೊಂಡಿದ್ದರು, ದೇಶದಲ್ಲಿ ಸಮಾನತೆಗಾಗಿ, ಮಹಿಳೆಯರ, ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದರು. ಎಂದು ಸ್ಮರಿಸಿದರು.

ಶೋಷಿತರ ಮತ್ತು ವಂಚಿತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಾಮಾಜಿಕ ಸಾಮರಸ್ಯದ ಅಮರ ಹೋರಾಟಗಾರರಾಗಿದ್ದರು. ಅವರ ಸ್ವಾಭಿಮಾನ ಹೋರಾಟದ ಜೀವನದಿಂದ ಇಂದು ಭಾರತ ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ, ಅವರ ತತ್ವ ಆದರ್ಶಗಳೊಂದಿಗೆ ನಮ್ಮ ಪ್ರಧಾನಿ ಮೋದಿಜಿ ದೇಶವನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಸ್.ಸಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮುಕ್ಕಣ್ಣ, ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ರವಿ ನಾಯಕ, ನಗರ ಎಸ್.ಸಿ ಮೋರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ್, ಯುವ ಮೋರ್ಚಾ ಅಧ್ಯಕ್ಷ ಭಾಗಣ್ಣ ದೊರೆ, ಮುಖಂಡರಾದ ರಮೇಶ ಕಾರಬಾರಿ, ಭೀಮರಾವ ದೊರೆ, ಕಿಶನ ಜಾಧವ, ಶಿವಶಂಕರ ಕಾಶೆಟ್ಟಿ, ಅಂಬದಾಸ ಜಾಧವ, ಆನಂದ ಇಂಗಳಗಿ, ರಿಚರ್ಡ್ ಮಾರೆಡ್ಡಿ, ಪ್ರೇಮ ರಾಠೊಡ, ದತ್ತಾ ಖೈರೆ, ಯಂಕಮ್ಮ ಗೌಡಗಾಂವ, ಉಮಾಭಾಯಿ ಗೌಳಿ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!