ವಾಡಿ ಬಿಜೆಪಿ ಕಚೇರಿಯಲ್ಲಿ ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ
ನಾಗಾವಿ ಎಕ್ಸಪ್ರೆಸ್
ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಭಾರತದ ಮಾಜಿ ಉಪ ಪ್ರಧಾನಿ ಡಾ ಬಾಬು ಜಗಜೀವನ್ ರಾಮ್ ಅವರ ಜಯಂತಿ ಆಚರಿಸಲಾಯಿತು.
ಈ ವೇಳೆ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡಿ, ಸಮಾಜ ಸುಧಾರಣೆ ಹಾಗೂ ಎಲ್ಲರೂ ಸಮಾನವಾಗಿ ಜೀವನ ನಡೆಸಬೇಕು ಎನ್ನುವ ಮಹತ್ವಾಕಾಂಕ್ಷೆಯನ್ನು ಅವರು ಹೊಂದಿದ್ದರು ಎಂದರು.
ಕಾರ್ಮಿಕರ ಏಳಿಗೆಯನ್ನು ಸದಾ ಬಯಸುತ್ತಿದ್ದ ಅವರು ದೇಶದ ಜನರು ಅಹಾರ ಕೊರತೆ ಅನುಭವಿಸುತ್ತಿರುವುದನ್ನು ಕಂಡು ಹಸಿರು ಕ್ರಾಂತಿ ಪ್ರಾರಂಭಿಸಿ ನೆರವಾದರು. ಇಂತಹ ಮಹಾನ್ ನಾಯಕರ ಕೊಡುಗೆ, ತತ್ವಾದರ್ಶಗಳನ್ನು ನಾವುಗಳು ಪಾಲಿಸಿ, ನಮ್ಮ ಯುವಜನತೆಗೆ ಇಂತಹ ನಾಯಕರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರೇರೇಪಿಸಬೇಕು ಎಂದು ಹೇಳಿದರು.
ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಬಾಬು ಜಗಜೀವನ ರಾಮ್ ಅವರು ದೇಶ ಕಂಡ ಮಹಾನ್ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದಕ್ಷ ಆಡಳಿತಗಾರರಾಗಿದ್ದರು ಎಂದರು. ಹಸಿರು ಕ್ರಾಂತಿಯ ಹರಿಕಾರರಾಗಿ ಜನಸಾಮಾನ್ಯರು ಎಂದೆಂದಿಗೂ ಮರೆಯದ ವ್ಯಕ್ತಿತ್ವವನ್ನು ಹೊಂದಿದ್ದರು. ಅವರು ಇಡೀ ರಾಜಕೀಯ ನಾಯಕರರುಗಳಿಗೆ ಮಾದರಿ ಎಂದರು.
ನೂತನವಾಗಿ ಜಿಲ್ಲಾ ಎಸ್ ಸಿ ಮೂರ್ಚಾದ ಉಪಾಧ್ಯಕ್ಷರಾದ ರಾಜು ಮುಕ್ಕಣ್ಣ ಅವರು ಅಭಿನಂದನೆ ಸ್ವೀಕರಿಸಿ, ಬಾಬು ಜಗಜೀವನ ರಾಮ್ ಅವರ ಜಯಂತಿಯ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಎಸ್ ಸಿ ಮೂರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ, ಹರಿ ಗಲಾಂಡೆ, ರಿಚರ್ಡ್ ಮಾರೆಡ್ಡಿ, ಭೀಮರಾವ ಸುಬೇದಾರ, ಮಲ್ಲಿಕಾರ್ಜುನ ಸಾತಖೇಡ, ಕುಮಾರ ರಡ್ಡಿ, ನಿರ್ಮಲಾ ಇಂಡಿ, ಯಂಕಮ್ಮ ಗೌಡಗಾಂವ, ಉಮಾಭಾಯಿ ಗೌಳಿ, ಹಾಜಪ್ಪ ಬಂಡಾರಿ, ರವಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

