Oplus_0

ವಾಡಿ ಬಿಜೆಪಿ ಕಚೇರಿಯಲ್ಲಿ ಭಗವಾನ್ ಬುದ್ಧ ಜಯಂತಿ ಆಚರಣೆ

ನಾಗಾವಿ ಎಕ್ಸಪ್ರೆಸ್ 

ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುದ್ಧ ಪೂರ್ಣಿಮೆಯ ಪ್ರಯುಕ್ತ ಬುದ್ಧನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಬುದ್ಧನ ಉನ್ನತ ಆದರ್ಶಗಳು, ಅಹಿಂಸಾ ತತ್ವ, ಸಾಮರಸ್ಯದ ಸಂದೇಶಗಳು ನೆಮ್ಮದಿ ಜೀವನಕ್ಕೆ ನಾಂದಿ ಎಂದರು.

ಅವರ ಮಾನವೀಯತೆಯ ಸಂಕೇತಗಳು ಇಡೀ ವಿಶ್ವಕ್ಕೆ ಅನ್ವಯವಾಗಿವೆ. ಅವರ ಜೀವನ ಸಮಾನತೆ, ಪ್ರೀತಿ, ದಯೆ, ಸಹಿಷ್ಣುತೆಯ ಪ್ರತೀಕವಾಗಿದೆ. ಸೌಹಾರ್ದ, ಸಹಾನುಭೂತಿಯಿಂದ ಸಮಾಜಕ್ಕಾಗಿ ಸೇವೆ ಮಾಡುವ ಸ್ಫೂರ್ತಿಯನ್ನು ನಮಗೆ ನೀಡಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ, ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಎಸ್ ಸಿ ಮೋರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ, ಮುಖಂಡರಾದ ಶರಣಗೌಡ ಚಾಮನೂರ, ಭೀಮರಾವ ದೊರೆ, ಆನಂದ ಇಂಗಳಗಿ, ಅಶೋಕ ಪಂಚಾಳ, ಮಲ್ಲಿಕಾರ್ಜುನ ಯಾದಗಿರ, ಬಸವರಾಜ ಹಲಕರ್ಟಿ, ಬಾಬು ಗುತ್ತೇದಾರ, ಯಂಕಮ್ಮ ಗೌಡಗಾಂವ, ನಿರ್ಮಲ ಇಂಡಿ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!