ವಾಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ
ನಾಗಾವಿ ಎಕ್ಸಪ್ರೆಸ್
ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ 76ನೇ ಸಂವಿಧಾನದ ಸಮರ್ಪಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮುಖಂಡರು ಪುಷ್ಪ ನಮನ ಸಲ್ಲಿಸಿ ಆಚರಿಸಿದರು.
ಈ ವೇಳೆ ಬಿಜೆಪಿ ಮುಖಂಡ ರಾಜು ಮುಕ್ಕಣ್ಣ ಮಾತನಾಡಿ, ಭಾರತವನ್ನು ಸಾರ್ವಭೌಮ, ಜಾತ್ಯತೀತ, ಸಮಾಜವಾದಿ ಮತ್ತು ಪ್ರಜಾಸತ್ತಾತ್ಮಕ ಗಣತಂತ್ರ ದೇಶ ಎಂದು ಸಂವಿಧಾನದಲ್ಲಿ ಘೋಷಿಸಿ ನಮ್ಮೆಲ್ಲರಿಗೂ ಮಾನವೀಯ ಬದುಕನ್ನು ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರು ನೀಡಿದ್ದಾರೆ ಎಂದರು.
ಇಲ್ಲಿರುವ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯ ಒದಗಿಸಲಾಗಿದೆ. ಭಾರತದ ಸಂವಿಧಾನವನ್ನು ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ ಎಂದು ಹೇಳಿದರು.
ಸಂವಿಧಾನ ದಿನದ ಘೋಷಣೆ ಮಾಡಿದ ದಿನವೂ ಒಂದು ರೀತಿಯಲ್ಲಿ ಐತಿಹಾಸಿಕವಾಗಿತ್ತು. 2015, ಡಾ. ಅಂಬೇಡ್ಕರ್ ಅವರ 125ನೇ ಜನ್ಮ ವರ್ಷಾಚರಣೆಯಾಗಿತ್ತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮುಂಬೈನಲ್ಲಿ ಅಂಬೇಡ್ಕರ್ ಅವರ ಸಮಾನತಾ ಪ್ರತಿಮೆಯ ಸ್ಮಾರಕಕ್ಕೆ ಶಿಲಾನ್ಯಾಸ ಮಾಡುತ್ತಿದ್ದ ಸಮಾರಂಭದಲ್ಲಿ ಇದನ್ನು ಘೋಷಿಸಿದರು ಎಂದು ಹೇಳಿದರು.
ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಸಂವಿಧಾನದ ಪೀಠಿಕೆ ಓದಿದರು. ಈ ಸಂಧರ್ಭದಲ್ಲಿ ಮುಖಂಡರಾದ ಶರಣಗೌಡ ಚಾಮನೂರ, ಗಿರಿಮಲ್ಲಪ್ಪ ಕಟ್ಟಿಮನಿ, ಯಮನಪ್ಪ ನವನಳ್ಳಿ, ಹರಿ ಗಲಾಂಡೆ, ಅಂಬದಾಸ ಜಾಧವ, ರಾಮು ರಾಠೋಡ, ಅಶೋಕ ಪವಾರ, ಆನಂದ ಇಂಗಳಗಿ, ಮಲ್ಲಿಕಾರ್ಜುನ ಸಾತಖೇಡ,ದಾನಪ್ಪ ಕಲ್ಲಶೆಟ್ಟಿ ಸೇರಿದಂತೆ ಇತರರು ಇದ್ದರು.

