ವಾಡಿ ಬಿಜೆಪಿ ಕಚೇರಿಯಲ್ಲಿ ಶ್ರೀ ಸವಿತಾ ಮಹರ್ಷಿ ಜಯಂತಿ ಆಚರಣೆ
ನಾಗಾವಿ ಎಕ್ಸಪ್ರೆಸ್
ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶ್ರೀ ಸವಿತಾ ಮಹರ್ಷಿ ಜಯಂತಿ ಅಂಗವಾಗಿ ಮುಖಂಡರು ಪುಷ್ಪ ನಮನ ಸಲ್ಲಿಸಿದರು.
ಈ ವೇಳೆ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡಿ, ಸವಿತಾ ಮಹರ್ಷಿಗಳು ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಮಹಾನ್ ಯುಗಪುರುಷ, ಸಮಾಜಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ ಎಂದರು.
ಚರ್ತುವೇದಗಳಲ್ಲಿ ಒಂದಾದ ಸಂಗೀತ ವೇದ ಎಂದೇ ಕರೆಯಲ್ಪಡುವ ಸಾಮವೇದವನ್ನು ರಚಿಸಿದ ಮಹಾನ್ ಬ್ರಹ್ಮಜ್ಞಾನಿ ಸವಿತಾ ಮಹರ್ಷಿ ಎಂದು ಹೇಳಲಾಗುತ್ತದೆ. ಸಾಮವೇದವು ಸಂಗೀತದ ಮೂಲಗ್ರಂಥವಾಗಿದ್ದು, ಹಾಗಾಗಿ ನಮ್ಮ ಸವಿತಾ ಸಮಾಜದವರು ಸಂಗೀತ, ವೈದ್ಯ ವೃತ್ತಿ ಹಾಗೂ ಕ್ಷೌರಿಕ ವೃತ್ತಿಯನ್ನೂ ಮಾಡಿಕೊಂಡು ಬರುತ್ತಿದ್ದಾರೆ. ಸವಿತಾ ಮಹರ್ಷಿಗಳು ಸಮಾಜಮುಖಿಯಾಗಿ ಬೆಳೆದು, ಸರ್ವರಿಗೂ ದಾರಿದೀಪವಾಗಿದ್ದಾರೆ ಎಂದು ಹೇಳಿದರು.
ಸ್ಥಳೀಯ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವ ಮುಖಂಡ ವಿಠಲ ವಾಲ್ಮೀಕಿ ನಾಯಕ, ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಎಸ್ ಸಿ ಮೂರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ್, ಶಿವಶಂಕರ ಕಾಶೆಟ್ಟಿ, ಮಲ್ಲಿಕಾರ್ಜುನ ಸಾತಖೇಡ, ರಾಜು ಪವಾರ, ರಾಜಶೇಖರ ದೂಪದ್, ಸವಿತಾ ಸಮಾಜದ ಅಧ್ಯಕ್ಷ ನಾಗರಾಜ ಚಾವಣಿಕರ, ಬಸವರಾಜ ಪಗಡಿಕರ್, ಬಾಲರಾಜ ಪಗಡಿಕರ್, ಸಚಿನ್ ನಾಲವಾರಕರ್, ಅಂಬ್ರೇಷ್ ಕಡದಾಳ, ಮಾಹಾಂತೇಶ ಚಾವಣಿಕರ್, ಕಲ್ಲಪ್ಪ ಅರಿಕೇರಿ, ವಿಶ್ವರಾಧ್ಯ ತಂಗಡಗಿ, ಆಂಜನೇಯ ಎಡಿಮದ್ರಿ, ವೆಂಕಟೇಶ ದುಗುನುಕರ್, ಚಂದ್ರಕಾಂತ ಬಿಳಾರ, ನಾಗರಾಜ ಅನ್ನಪುರ ಸೇರಿದಂತೆ ಇತರರು ಇದ್ದರು.