Oplus_0

ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಕೋಲಿ ಸಮಾಜಕ್ಕೆ ನೀಡುವಂತೆ ರಮೇಶ್ ಡಿಸಿ ಮನವಿ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ತಾಲೂಕಿನ ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಕೋಲಿ ಸಮಾಜದ ಹಾಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ನಾಗೇಂದ್ರ ಜೈಗಂಗಾ ಅವರನ್ನು ನೇಮಕ ಮಾಡಬೇಕು ಎಂದು ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಮೇಶ್ ಡಿಸಿ ಕೊಂಚೂರ್ ಕಾಂಗ್ರೆಸ್ ಹೈಕಮಾಂಡ್ ಗೆ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಲ್ಲಿವರೆಗೆ ಕೋಲಿ ಸಮಾಜದವರಿಗೆ ಅವಕಾಶ ನೀಡಿಲ್ಲ ಹೀಗಾಗಿ ಈ ಬಾರಿ ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ಕೋಲಿ ಸಮಾಜದವರಿಗೆ ಅವಕಾಶ ನೀಡಬೇಕು. ವಾಡಿ ಬ್ಲಾಕ್ ನಲ್ಲಿ ಕೋಲಿ ಸಮಾಜದ ಜನಸಂಖ್ಯೆ ಹೆಚ್ಚಿದೆ, ಆದರೂ ಇಲ್ಲಿವರೆಗೆ ಪಕ್ಷದ ಯಾವುದೇ ಸ್ಥಾನಮಾನ ಹಾಗೂ ಸಂಘಟನೆಯ ಜವಾಬ್ದಾರಿ ನೀಡಿಲ್ಲ ಎಂದು ತಿಳಿಸಿದ್ದಾರೆ.

ನಾಗೇಂದ್ರ ಜೈಗಂಗಾ ಸುಮಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಹೀಗಾಗಿ ಇವರ ಸೇವೆಯನ್ನು ಪರಿಗಣಿಸಿ ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಮಾಡಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!