ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿ: ಶಿವರಾಜ್ ಪಾಟೀಲ್ ಇಂಗಿತ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾನು ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಕಾಂಗ್ರೆಸ್ ಯುವ ಮುಖಂಡ ಶಿವರಾಜ್ ಪಾಟೀಲ್ ತುನ್ನೂರ್ ತಿಳಿಸಿದ್ದಾರೆ.
ಈ ಕುರಿತು ಸೋಮವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಡಬೂರ ಗ್ರಾಮ ಪಂಚಾಯತ್ ಸದಸ್ಯನಾಗಿ, ವಾಡಿ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಯುವ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದೇನೆ. ಕಳೆದ 2008 ರಿಂದ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ಹೀಗಾಗಿ ನನ್ನ ಸೇವೆಯನ್ನು ಪರಿಗಣಿಸಿ ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.
ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಲ್ಲಿವರೆಗೆ ಯುವಕರಿಗೆ ಅವಕಾಶ ನೀಡಿಲ್ಲ, ಆದ್ದರಿಂದ ಈ ಬಾರಿ ಯುವಕರಿಗೆ ಅವಕಾಶ ನೀಡಬೇಕು. ನಾನು ಯುವಕನಾಗಿದ್ದು ನನಗೆ ಅಧ್ಯಕ್ಷ ಸ್ಥಾನ ನೀಡಿದರೆ ಪಕ್ಷದ ಸಂಘಟನೆ ಮತ್ತಷ್ಟು ಬಲ ಪಡಿಸುವ ನಿಟ್ಟಿನಲ್ಲಿ ಶ್ರಮವಹಿಸುತ್ತೇನೆ ಎಂದು ತಿಳಿಸಿದ್ದಾರೆ.

