Oplus_0

ಕೈಲಾಸ ನಗರ ಶಾಲೆಯಲ್ಲಿ ಮಕ್ಕಳ ದಿನಾಚರಣೆ | ಮಕ್ಕಳಿಗೆ ಉಚಿತ ಬ್ಯಾಗ್ ವಿತರಿಸಿದ ನೋವೆಲ್ ಹೋಪ್ ಪೌಂಡೇಶನ್ ಕಾರ್ಯ ಶ್ಲಾಘನೀಯ: ಬಳೂಂಡಗಿ

ನಾಗಾವಿ ಎಕ್ಸಪ್ರೆಸ್ 

ವಾಡಿ: ಶಿಕ್ಷಣದ ಗುಣಮಟ್ಟ ಮತ್ತು ಮಕ್ಕಳ ಹಾಜರಾತಿ ಹೆಚ್ಚಿಸಲು ಗ್ರಾಮೀಣ ಮಟ್ಟದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತವಾಗಿ ಬ್ಯಾಗಗಳು ವಿತರಿಸಿದ ಕಾರ್ಯ ಶ್ಲಾಘನೀಯ ಎಂದು  ಶಾಲೆಯ ಮುಖ್ಯಗುರು ಹಾಗೂ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಹೇಳಿದರು.

ಪಟ್ಟಣದ ಕೈಲಾಸ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಹಾಗೂ ಪೋಷಕ ಶಿಕ್ಷಕರ ಮಹಾಸಭೆ ಮತ್ತು ನೋವೆಲ್ ಹೋಪ್ ಪೌಂಡೇಶನ್ ಬೆಂಗಳೂರು ವತಿಯಿಂದ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳ ಶಿಕ್ಷಣಕ್ಕೆ ಸರ್ಕಾರಗಳು ಹಾಗೂ ಖಾಸಗಿ ಕಂಪನಿಗಳು ಸಂಘಸಂಸ್ಥೆಗಳು ಸಾಕಷ್ಟು ಸೌಲಭ್ಯಗಳನ್ನು ಹಾಗೂ ಯೋಜನೆಗಳು ಅನುಷ್ಠಾನಗೊಳಿಸಿವೆ ಹೀಗಾಗಿ ಪಾಲಕ ಪೋಷಕರು ಇವುಗಳ ಸದುಪಯೋಗ ಪಡೆದುಕೊಂಡು, ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಮಾಡಿಸಿ ನಿತ್ಯ ಶಾಲೆಗೆ ಕಳುಹಿಸಿ ಮಕ್ಕಳ ಉತ್ತಮ ಭವಿಷ್ಯ ರೂಪಿಸಬೇಕು ಎಂದು ಕರೆ ನೀಡಿದರು.

ಫೌಂಡೆಶನ್ ವ್ಯವಸ್ಥಾಪಕ ದೀಪಕ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಿಂದ ಫೌಂಡೇಶನ್ ವತಿಯಿಂದ ಮಕ್ಕಳ ಕಲಿಕೆಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.

ಮುಂದಿನ ವರುಷದಲ್ಲಿ ಮಕ್ಕಳಿಗೆ ಊಟದ ತಟ್ಟೆಗಳು, ಬಾಟಲಗಳು ಮತ್ತು ಬಡ ಮಕ್ಕಳಿಗೆ ವೈದ್ಯಕೀಯ ಶಸ್ತ್ರಚಿಕ್ಸಿತೆ ವೆಚ್ಚ ಕೂಡ ಪೌಂಡೇಶನ್ ವತಿಯಿಂದ ಭರಿಸಲಾಗುವುದು ಎಂದು ಹೇಳಿದರು.

ಎಲ್ಲಾ ಪಾಲಕ- ಪೋಷಕರು ಪೌಂಡೇಶನ್ ರವರು ಶಿಕ್ಷಣದ ಬಗ್ಗೆ ಹೊಂದಿರುವ ಕಾಳಜಿ, ಮಕ್ಕಳಿಗೆ ನೀಡುವ ಸಹಾಯ- ಸಹಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಗ್ರಾಮದ ಮುಖಂಡರಾದ ಪ್ರಕಾಶ್ ರಾಥೋಡ, ಗಣೇಶ, ಅಶೋಕ್, ಶಿಕ್ಷಕಿಯರಾದ ಇಂದಿರಾ ಬಾಯಿ, ವಿಜಯಲಕ್ಮೀ, ಅಂಗನವಾಡಿ ಕಾರ್ಯಕರ್ತೆಯರಾದ ಅನಿತಾ, ಶಾಂತಾಬಾಯಿ, ಅಕ್ಷರ ದಾಸೋಹ ನೀಲಮ್ಮ. ಯಂಕಮ್ಮ ಸೇರಿದಂತೆ ಪಾಲಕ ಪೋಷಕರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!