Oplus_0

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಶಶೀಲ್ ನಮೋಶಿ ಗೆಲುವು | ವಾಡಿ ಪಟ್ಟಣದಲ್ಲಿ ಬಿಜೆಪಿ ಸಂಭ್ರಮಾಚರಣೆ

ನಾಗಾವಿ ಎಕ್ಸಪ್ರೆಸ್ 

ವಾಡಿ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಶಶೀಲ್ ನಮೋಶಿ ಅವರ ಭರ್ಜರಿ ಗೆಲುವು ಖಚಿತವಾಗುತ್ತಿದ್ದಂತೆಯೇ, ಮಂಗಳವಾರ ರಾತ್ರಿ ಪಟ್ಟಣದ ಆಝಾದ್ ವೃತ್ತದಲ್ಲಿ ಬಿಜೆಪಿ ಮುಖಂಡರು ಒಟ್ಟುಗೂಡಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಅವರು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರನ್ನು ಸೋಲಿಸುವ ಮೂಲಕ ಶಶೀಲ್ ನಮೋಶಿ ಅವರು ಐದನೇ ಬಾರಿಗೆ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದು ನಮ್ಮೆಲ್ಲರಿಗೂ ಹರ್ಷ ಹಿಮ್ಮಡಿಸಿದೆ ಎಂದರು.

ಈ ಗೆಲುವು ರಾಜ್ಯ ಸರ್ಕಾರದ ಮೇಲಿರುವ ಆಡಳಿತ ವಿರೋಧಿ ಅಲೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಈಶಾನ್ಯ ಭಾಗದಲ್ಲಿ ಬಿಜೆಪಿಯ ಭದ್ರಕೋಟೆ ಮುಂದುವರಿದಿದ್ದು, ಮುಂಬರುವ ಎಲ್ಲಾ ಚುನಾವಣೆಗಳಿಗೆ ಇದು ದಿಕ್ಸೂಚಿಯಾಗಿದೆ ಎಂದು ಹೇಳಿದರು.

ಈ ಸಂಭ್ರಮಾಚರಣೆಯಲ್ಲಿ ಜಿಲ್ಲಾ ರೈತ ಮೂರ್ಚಾ ಪ್ರಧಾನ ಕಾರ್ಯದರ್ಶಿ ಸುರೇಶ ರಾಠೋಡ, ಸ್ಥಳೀಯ ಎಸ್‌ಸಿ ಮೋರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ್, ಯುವ ಮೋರ್ಚಾ ಅಧ್ಯಕ್ಷ ಭಾಗಣ್ಣ ದೊರೆ, ಮುಖಂಡರಾದ ಶರಣಗೌಡ ಚಾಮನೂರ, ಭೀಮರಾವ ದೊರೆ, ರಾಮು ರಾಠೋಡ, ರಿಚರ್ಡ್ ಮಾರೆಡ್ಡಿ, ಅಶೋಕ ಪವಾರ, ಕಿಶನ ಜಾಧವ, ಅಂಬದಾಸ ಜಾಧವ, ಹಣಮಂತ ಚವ್ಹಾಣ, ದತ್ತಾ ಖೈರೆ, ಗಣಪತ ಸುತ್ರಾವೆ, ಅಯ್ಯಣ್ಣ ದಂಡೋತಿ, ರವಿ ಜಾಧವ, ವಿಶಾಲ ನಿಂಬರ್ಗಾ, ಸತೀಶ ಸಾವಳಗಿ, ವಿಶ್ವರಾಧ್ಯ ತಳವಾರ, ಚಂದ್ರಶೇಖರ ಬೆಣ್ಣೂರ, ಪರಮೇಶ್ವರ ಚೊಪಡೆ, ರಾಜು ಗುತ್ತೆದಾರ, ಅಶೋಕ ಕೊಲಿ, ಮರಲಿಂಗ ದೇವಪುರ, ವಿನಾಯಕ ಖೈರೆ, ರಾಜು ಯಾದವ, ಸೋಮನಾಥ ಖೈರೆ ಸೇರಿದಂತೆ ಹಲವು ಬಿಜೆಪಿ ಪ್ರಮುಖರು ಪಾಲ್ಗೊಂಡಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!