ವಾಡಿ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆ
ನಾಗಾವಿ ಎಕ್ಸಪ್ರೆಸ್
ವಾಡಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶನಿವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 69 ನೇ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು.
ಅಪರಾಧ ವಿಭಾಗದ ಪಿಎಸ್ಐ ರೇಣುಕಾ ಎಸ್.ಉಡಗಿ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ವಿಶೇಷ ಪೊಲೀಸ್ ಪೇದೆ ಲಕ್ಷ್ಮಣ ತಳಕೇರಿ, ಎಎಸ್ಐ ಶರಣಪ್ಪ ಜಾಂಜಿ, ಗೀತಾ, ಮಹಾದೇವಿ, ರಮೇಶ್, ಆನಂದ, ಶಶಿಕಾಂತ, ಅಮರ್ ಇದ್ದರು.

