Oplus_0

ವಾಡಿ ರೈಲ್ವೆ ನಿಲ್ದಾಣಕ್ಕೆ ಬಾಬಾಸಾಹೇಬ ಅಂಬೇಡ್ಕರ ರೈಲ್ವೆ ನಿಲ್ದಾಣವೆಂದು ಮರು ನಾಮಕರಣಗೊಳಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಸರ್ಕಾರಕ್ಕೆ ಪತ್ರ 

ನಾಗಾವಿ ಎಕ್ಸಪ್ರೆಸ್ 

ಕಲಬುರಗಿ: ಜಿಲ್ಲೆಯ ವಾಡಿ ಪಟ್ಟಣಕ್ಕೆ ಬಾಬಾಸಾಹೇಬ ಅಂಬೇಡ್ಕರ್ ರವರು ಜೀವಿತಾವಧಿಯಲ್ಲಿ ಎರಡು ಭಾರಿ  ಭೇಟಿ ನೀಡಿರುವ ಸವಿನೆನಪಿಗಾಗಿ ಪ್ರಸ್ತುತ ವಾಡಿ ಜಂಕ್ಷನ್ ರೈಲ್ವೆ ನಿಲ್ದಾಣದ ಹೆಸರನ್ನು ಡಾ ಬಾಬಾಸಾಹೇಬ ಅಂಬೇಡ್ಕರ ರೈಲ್ವೆ ನಿಲ್ದಾಣವೆಂದು ಮರು ನಾಮಕರಣಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಈ ಕುರಿತು ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಭಾರಿ ಮತ್ತು ಮಧ್ಯಮ ಕೈಗಾರಿಕೆ ಸಚಿವ  ಎಂ.ಬಿ.ಪಾಟೀಲ ಅವರಿಗೆ ಪತ್ರ ಬರೆದಿರುವ ಸಚಿವರು, ವಾಡಿ ಜಂಕ್ಷನ್ ರೈಲ್ವೆ ನಿಲ್ದಾಣದ ಹೆಸರನ್ನು ಡಾ. ಬಾಬಾಸಾಹೇಬ ಅಂಬೇಡ್ಕರ ರೈಲ್ವೆ ನಿಲ್ದಾಣವೆಂದು ಮರು ನಾಮಕರಣಗೊಳಿಸಬೇಕು ಎಂದು ಕಾಂಗ್ರೇಸ್ ಹಿರಿಯ ಮುಖಂಡ ಟೋಪಣ್ಣ ಕೋಮಟೆ ವಾಡಿ ಇವರು ತಮ್ಮ ಮನವಿಯಲ್ಲಿ ಕೋರಿರುತ್ತಾರೆ.

ಸದರಿಯವರ ಕೋರಿಕೆಯನ್ನು ಪರಿಗಣಿಸಿ, ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೋರಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!