ವಾಡಿ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡದೆ, ಕನ್ನಡಾಂಬೆಗೆ ಅಪಮಾನ ಕ್ರಮಕ್ಕೆ ಕರವೇ ಆಗ್ರಹ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಆದರೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ವಾಡಿ ಪಟ್ಟಣದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡದೆ, ಕನ್ನಡಾಂಬೆಗೆ ಅಪಮಾನ ಮಾಡಿರುವುದು ಖಂಡನಾರ್ಹ, ಕೂಡಲೆ ಸಂಭಂಧಿಸಿದ ಅಧಿಕಾರಿಗಳು ಈ ಕುರಿತು ಗಮನ ಹರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಕರವೇ ಪ್ರವೀಣಶೆಟ್ಟಿ ಬಣ ವಾಡಿ ವಲಯದ ಅಧ್ಯಕ್ಷ ಸಿದ್ದು ಎಸ್ ಪೂಜಾರಿ ಆಗ್ರಹಿಸಿದ್ದಾರೆ.