ಯಾದಗಿರಿ ಬಿಜೆಪಿ ಜಿಲ್ಲಾ ವಕ್ತಾರರಾಗಿ ನೇಮಕವಾದ ಹಣಮಂತ ಇಟಗಿಗೆ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಯಾದಗಿರಿ: ಭಾರತೀಯ ಜನತಾ ಪಕ್ಷದ ಯಾದಗಿರಿ ಜಿಲ್ಲೆಯ ವಕ್ತಾರರಾಗಿ ನೇಮಕವಾದ ಹಣಮಂತ ಇಟಗಿ ಅವರನ್ನು ನಗರದ ಎಸ್ ಡಿ ಎನ್ ಹೋಟೆಲನಲ್ಲಿ ಮಾದಿಗ ಸಮಾಜದ ವತಿಯಿಂದ ಸನ್ಮಾನ ಮಾಡಲಾಯಿತು.
ಸನ್ಮಾನ ಸ್ವೀಕರಿಸಿದ ಮಾತನಾಡಿದ ಹಣಮಂತ ಇಟಗಿ, ಪಕ್ಷ ನೀಡಿರುವ ಜವಾಬ್ದಾರಿಯನ್ನು ತಪ್ಪದೇ ಪಾಲಿಸುತ್ತೇನೆ ಜಿಲ್ಲೆಯಲ್ಲಿರುವ ಭ್ರಷ್ಟಾಚಾರ, ಅತ್ಯಾಚಾರ, ಅನ್ಯಾಯದ ವಿರುದ್ಧ ಧ್ವನಿಯೆತ್ತುತ್ತೇನೆ ಈ ಮೂಲಕ ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ದೇವಿಂದ್ರನಾಥ್ ನಾದ್, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಚಂದ್ರಶೇಖರ್ ಕಡೆಸೂರ್, ಬಿಜೆಪಿ ಮುಖಂಡರಾದ ಆಂಜನೇಯ ಬಬಲಾದಿ, ತಿಪ್ಪಣ್ಣ ಕೊನಿಮನಿ, ನಿಂಗಪ್ಪ ವಡನಳ್ಳಿ, ಪ್ರಜ್ವಲ್ ಸೇರಿದಂತೆ ಅನೇಕ ಮುಖಂಡರು ಇದ್ದರು.