ಯಾದಗಿರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 68 ನೇ ಮಹಾ ಪರಿನಿರ್ವಾಣ ದಿನಾಚರಣೆ
ನಾಗಾವಿ ಎಕ್ಸಪ್ರೆಸ್
ಯಾದಗಿರಿ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ ಅವರ 68 ನೇ ಮಹಾ ಪರಿನಿರ್ವಾಣ ದಿನಾಚರಣೆ ನಿಮಿತ್ತ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಬಿಜೆಪಿ ಯುವ ಮುಖಂಡ ಮಹೇಶರೆಡ್ಡಿ ಗೌಡ ಮುದ್ನಾಳ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ರವರು ನಿಧನ ಹೊಂದಿದಾಗ 193 ದೇಶಗಳು ರಾಷ್ಟ್ರ ಧ್ವಜ ಕೆಳಗಿಳಿಸಿ ಗೌರವ ಸೂಚಿಸಿದವು. ಪ್ರಧಾನಮಂತ್ರಿ ನರೇಂದ್ರ ಮೋದಿ ರವರು ಅಂಬೇಡ್ಕರ ಅವರ ವಿಚಾರ ಸಿದ್ಧಾಂತಗಳಿಗೆ ಹೆಚ್ಚಿನ ಆಸಕ್ತಿ ಮಹತ್ವ ಕೊಡುತ್ತಿದ್ದಾರೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ವಕ್ತಾರ ನಗರಸಭೆ ಸದಸ್ಯ ಹಣಮಂತ ಇಟಗಿ, ಸ್ವಾಮೀದೇವ ದಾಸನಕೇರಿ, ನಗರ ಪ್ರದಾನ ಕಾರ್ಯದರ್ಶಿ ರಮೇಶ್ ದೊಡ್ಡಮನಿ, ಮಲ್ಲಿಕಾರ್ಜುನ ಕಟ್ಟಿಮನಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶ್ರೀಧರ್ ಸಾಹುಕಾರ್, ಮೌನೇಶ ಬೆಳಿಗೇರಿ, ಮಲ್ಲು ಕೋಳಿವಾಡ, ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ವನಿಗೇರಾ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ್ ಕಾಡಮನೋರ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಚಂದ್ರಶೇಖರ ಕಡೆಸೂರ, ನಾಗಪ್ಪ ಗಚ್ಚಿನಮನಿ, ಶ್ರೀಕಾಂತ್ ಸುಂಗುಲಕರ್, ನಾಗರೆಡ್ಡಿ ಇಬ್ರಾಹಿಂಪುರ್, ತಿರುಪತಿ, ನಗರ ಸಭೆ ಸದಸ್ಯರಾದ ವಿಜಯಲಕ್ಷ್ಮಿ ನೆನೆಕಿ, ಚಂದ್ರಕಲಾ, ಶಕುಂತಲಾ ಗುಜ್ಜಲೂರ್, ನಗರ ರೈತ ಮೋರ್ಚಾ ಮೋರ್ಚ ಅಧ್ಯಕ್ಷ ಅಧ್ಯಕ್ಷ ಶಿವಣ್ಣ ವಿಶ್ವಕರ್ಮ, ಪ್ರಜ್ವಲ್ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.