Oplus_0

ಯಾದಗಿರಿ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ | ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ ಮತ್ತು ಹೋರಾಟ ತತ್ವಗಳು ಸಮಾಜ ಪರಿವರ್ತನೆಗೆ ದಾರಿದೀಪ: ವಿಭೂತಿಹಳ್ಳಿ

ನಾಗಾವಿ ಎಕ್ಸಪ್ರೆಸ್ 

ಯಾದಗಿರಿ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾರತ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ್ ವಿಭೂತಿಹಳ್ಳಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನವು ಎಲ್ಲ ವರ್ಗಗಳಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿರುವ ಮಹತ್ವದ ದಾಖಲೆ ಎಂದು ಹೇಳಿದರು. ಸಮಾಜದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅಂಬೇಡ್ಕರ್ ಅವರ ಚಿಂತನೆಗಳು ಇಂದಿಗೂ ಮಾರ್ಗದರ್ಶಕವಾಗಿವೆ. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ಅವರ ತತ್ವಗಳು ಸಮಾಜ ಪರಿವರ್ತನೆಗೆ ದಾರಿದೀಪವಾಗಿವೆ ಎಂದರು.

ಅಂಬೇಡ್ಕರ್ ಅವರು ಸಮಾನತೆ ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಗಾಗಿ ಜೀವನಪೂರ್ತಿ ಶ್ರಮಿಸಿದ ಮಹಾನ್ ನಾಯಕರು. ದೇಶದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರವಾಗಿದೆ. ಸಂವಿಧಾನದ ಮೂಲಕ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ನೀಡುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಹೇಳಿದರು.

ಇಂದಿನ ಯುವಜನತೆ ಅಂಬೇಡ್ಕರ್ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸಮಾಜದ ದುರ್ಬಲ ವರ್ಗಗಳ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಸಮಾನತೆ, ಸಹೋದರತ್ವ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದು ಹೇಳಿದರು.

ಬಿಜೆಪಿ ರಾಜ್ಯ ಮಾಜಿ ಉಪಾಧ್ಯಕ್ಷೆ ನಾಗರತ್ನ ಕುಪ್ಪಿ ಮಾತನಾಡಿ, ಅಂಬೇಡ್ಕರ್ ಅವರು ಶಿಕ್ಷಣ, ಸಮಾನತೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಜೀವನಪೂರ್ತಿ ಹೋರಾಡಿದ ಮಹಾನ್ ನಾಯಕರು ಎಂದು ಹೇಳಿದರು. ಮಹಿಳೆಯರ ಹಕ್ಕುಗಳು ಹಾಗೂ ಸಬಲೀಕರಣಕ್ಕೆ ಅಂಬೇಡ್ಕರ್ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಮಹಿಳೆಯರಿಗೆ ಶಿಕ್ಷಣ, ಸಮಾನ ಅವಕಾಶ ಹಾಗೂ ಗೌರವಯುತ ಜೀವನ ದೊರಕಬೇಕೆಂಬುದು ಅವರ ಪ್ರಮುಖ ಕನಸಾಗಿತ್ತು ಎಂದು ಹೇಳಿದರು.

ಇಂದಿನ ಮಹಿಳೆಯರು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿರುವುದು ಅಂಬೇಡ್ಕರ್ ಅವರ ಚಿಂತನೆಯ ಫಲವಾಗಿದೆ. ಮಹಿಳೆಯರು ಆತ್ಮವಿಶ್ವಾಸದಿಂದ ಮುಂದೆ ಬಂದು ಸಮಾಜ ನಿರ್ಮಾಣದಲ್ಲಿ ಸಕ್ರಿಯ ಪಾತ್ರ ವಹಿಸಬೇಕು ಎಂದು ಹೇಳಿದರು.

ಜಿ.ಪಂ. ಮಾಜಿ ಸದಸ್ಯ ಖಂಡಪ್ಪ ದಾಸನಕೇರಿ ಮಾತನಾಡಿ, ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಿದೆ. ಅವರ ತತ್ವಗಳು ಸಮಾಜದಲ್ಲಿ ಸಮಾನತೆ ಮತ್ತು ಸಹೋದರತ್ವವನ್ನು ಬೆಳೆಸಲು ನೆರವಾಗಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಜಿಪಿ ಜಿಲ್ಲಾ ಪ್ರ.ಕಾ ಪರಶುರಾಮ ಕುರಕುಂದಿ, ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ, ದೇವಿಂದ್ರನಾಥ್ ನಾದ್, ನಗರ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ನಗರ ಪ್ರ.ಕಾ ಮಲ್ಲಿಕಾರ್ಜುನ ಕಟ್ಟಿಮನಿ, ಜಿಲ್ಲಾ ಯುವ ಮೊರ್ಚಾ ಅಧ್ಯಕ್ಷ ಶ್ರೀಧರ್ ಸಾಹುಕಾರ, ಮಹೇಶ್ ರೆಡ್ಡಿ ಮುದ್ನಾಳ, ರಾಜ್ಯ ಮಹಿಳಾ ಕಾರ್ಯಕಾರಣಿ ಸದಸ್ಯ ವೀಣಾ ಮೋದಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಸುನಿತಾ ಚೌವಣ್, ಜಿಲ್ಲಾ ಕಾರ್ಯದರ್ಶಿ ವಿಜಯಲಕ್ಷ್ಮಿ ನಾಯಕ, ಚಂದ್ರಕಲಾ ಹಿರೇಮಠ, ಶಕುಂತಲಾ ಗುಜುನೂರ್, ಗೋವಿಂದಪ್ಪ ಪಂಚೆಟ್ಟಿ, ರಮೇಶ್ ದೊಡ್ಡಮನಿ, ವೆಂಕಟರೆಡ್ಡಿ ಅಬ್ಬೆತುಮಕೂರು, ಸ್ವಾಮಿದೇವ್ ದಾಸನಕೇರಿ, ನಾಗರೆಡ್ಡಿ ಇಬ್ರಾಹಿಂಪುರ, ಶರಣಗೌಡ ಕ್ಯಾತನಾಳ, ಶಂಕರ್ ಸೋನಲ್, ಚಂದ್ರಶೇಖರ್ ಕಡೆಸೂರ್, ಮಲ್ಲಿಕಾರ್ಜುನ್ ಜಲಪ್ಪನೂರ್, ಚಂದಪ್ಪ ರಾಮಸಮುದ್ರ, ಮಲ್ಲಿಕಾರ್ಜುನ ಕುರಕುಂಬಳ, ಮಲ್ಲಿಕಾರ್ಜುನ ಹೋನಿಗೇರಾ, ಸುರೇಶ್ ರಾಥೋಡ್, ಮಲ್ಲುಸ್ವಾಮಿ ಗುಡಿಮಠ, ಕಾಶಿನಾಥ್ ಚಿರಸಾಗರ್, ಮರಿಲಿಂಗ ಜೀನಾಕೇರಾ, ಗೋಪಾಲ್ ನಡಿಯಾಳ್, ಮಲ್ಲಿಕಾರ್ಜುನ್ ಮುದ್ನಾಳ್ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!