ಯಾದಗಿರಿ ಬಿಜೆಪಿ ಕಚೇರಿಯಲ್ಲಿ ಕ-ಕ ಉತ್ಸವ ದಿನಾಚರಣೆ, ವಿಶ್ವಕರ್ಮ ಜಯಂತಿ, ನರೇಂದ್ರ ಮೋದಿ ಜನ್ಮದಿನಾಚರಣೆ
ನಾಗಾವಿ ಎಕ್ಸಪ್ರೆಸ್
ಯಾದಗಿರಿ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ ಅವರು ಪಕ್ಷದ ಪದಾಧಿಕಾರಿಗಳ ಸಮ್ಮುಖದಲ್ಲಿ ನೆರವೇರಿಸಿದರು.
ನಂತರದಲ್ಲಿ ವಿಶ್ವಕರ್ಮ ಜಯಂತೋತ್ಸವವನ್ನು ಆಚರಿಸಲಾಯಿತು. ಮತ್ತು ವಿಶ್ವಕಂಡ ಜನಪ್ರಿಯ ನಾಯಕರು, ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನದಡಿಯಲ್ಲಿ ಸಸಿ ನೆಡುವ ಮೂಲಕ ಜನ್ಮದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಗುರು ಕಾಮಾ, ಪರಶುರಾಮ ಕುರಕುಂದಿ, ಹಿರಿಯ ಮುಖಂಡರಾದ ದೇವಿಂದ್ರನಾಥ ನಾದ್, ನಾಗರತ್ನ ಕುಪ್ಪಿ, ಬಿಜೆಪಿ ಜಿಲ್ಲಾ ವಕ್ತಾರ ಹಣಮಂತ ಇಟಗಿ, ಚನ್ನರೆಡ್ಡಿ ಬಿಲ್ಹಾರ್, ಚಂದ್ರಶೇಖರ ಕಡೆಸೂರ
ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಪ್ರಮುಖರು, ಎಲ್ಲಾ ಸ್ಥರದ ರಾಜ್ಯ, ಜಿಲ್ಲಾ, ಮಂಡಲ, ವಿವಿಧ ಮೋರ್ಚಾ, ಪ್ರಕೋಷ್ಠ, ಅಭಿಯಾನ ತಂಡದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.