Oplus_0

ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಕರುಣಾಕರ ಕಾಸಲೆ ಅವರಿಗೆ ಯಾದಗಿರಿ ಮುಖಂಡರಿಂದ ಸನ್ಮಾನ

ನಾಗಾವಿ ಎಕ್ಸಪ್ರೆಸ್ 

ಯಾದಗಿರಿ: ನಗರದ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಕನ್ನಡ ವತಿಯಿಂದ ಆಯೋಜಿಸಿರುವ ಪಂಡಿತ್ ದಿನ್ ದಯಾಳ್ ಉಪಾಧ್ಯಾಯರ ಪ್ರಶಿಕ್ಷಣ ವರ್ಗದ ಕಾರ್ಯಕ್ರಮಕ್ಕೆ ಆಗಮಿಸಿದ ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಕರುಣಾಕರ್ ಕಾಸಲೆ ಹಾಗೂ ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ ಸದಸ್ಯ ವೆಂಕಟಪ್ರಸಾದ್ ಮಾಲಿ ಪಾಟೀಲ ಅವರನ್ನು ಯಾದಗಿರಿ ಮತಕ್ಷೇತ್ರದ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಸನ್ಮಾನ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಲಲಿತಾ ಅನಪುರ, ಜಿಲ್ಲಾ ಬಿಜೆಪಿ ವಕ್ತಾರ ಹಣಮಂತ ಇಟಗಿ, ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕ ವಿರುಪಾಕ್ಷಯ್ಯ ಸ್ವಾಮಿ ಹೆಡಗಿಮದ್ರ, ಜಿಲ್ಲಾ ಬಿಜೆಪಿ ಮಾಧ್ಯಮ ಸಹ ಸಂಚಾಲಕ ಚಂದ್ರಶೇಖರ್ ಕಡೆಸೂರ್, ಗುರುಮಠಕಲ್ ಮತಕ್ಷೇತ್ರದ ಮುಖಂಡ ಮರಲಿಂಗ ಜಿನಿಕೇರ, ನಾಗಪ್ಪ ಗಚ್ಚಿನಮನಿ ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!