ಯಾದಗಿರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನಾಚರಣೆ | ಅಂಬೇಡ್ಕರ್ ಮಹಾನ್ ಮಾನವತಾವಾದಿ: ವಿಭೂತಿಹಳ್ಳಿ
ನಾಗಾವಿ ಎಕ್ಸಪ್ರೆಸ್
ಯಾದಗಿರಿ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 69 ನೇ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ್ ವಿಭೂತಿಹಳ್ಳಿ ಮಾತನಾಡಿ, ಭಾರತ ದೇಶಕ್ಕೆ ಸುಭದ್ರ ಸಂವಿಧಾನ ಕೊಟ್ಟು ಪ್ರತಿಯೊಬ್ಬರಿಗೂ ಬದುಕುವ ಹಕ್ಕನ್ನು ನೀಡಿದ ಮಹಾನ್ ಮಾನವತಾವಾದಿ ಅಂಬೇಡ್ಕರ್ ಎಂದು ಹೇಳಿದರು.
ಶಿಕ್ಷಣ, ಸಂಘಟನೆ, ಹೋರಾಟ ಸ್ವಾಭಿಮಾನ ದಿಂದ ಭಾರತದ ನಾಗರಿಕರು ಬದುಕಬೇಕು ಎಲ್ಲರಿಗೂ ಒಂದೇ ನ್ಯಾಯ ಎಂದು ದೇಶದ ಜನರಿಗೆ ಸಂವಿಧಾನದಲ್ಲಿ ರಕ್ಷಣೆ ಕೊಟ್ಟಿರುವ ಮಹಾನ್ ನಾಯಕ ಅವರ ಆದರ್ಶ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ದೇವಿಂದ್ರನಾಥ್ ನಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ್ ಕುರುಕುಂದ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನಿತಾ ಚವ್ಹಾಣ, ಜಿಲ್ಲಾ ಮುಖಂಡ ಮಲ್ಲಿಕಾರ್ಜುನ್ ಹೋನಿಗೆರಾ ನಗರಸಭೆ ಸದಸ್ಯರಾದ ವಿಜಯಲಕ್ಷ್ಮಿ ನಾಯಕ್, ಶಕುಂತಲಾ ಜಿ, ನಗರ ಮಹಿಳಾ ಮೋರ್ಚಾ ಅಧ್ಯಕ್ಷ ಭೀಮಬಾಯಿ ಸೆಂಡಿಗಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಚನ್ನವೀರಯ್ಯ ಸ್ವಾಮಿ ಕಟಿಗಿಶಹಪುರ, ಸಲೋಮನ್ ಯಡಹಳ್ಳಿ, ವೆಂಕಟೇಶ್ ಸೇರಿದಂತೆ ಮುಂತಾದವರು ಇದ್ದರು.

