ಯಾದಗಿರಿ ಜಿಲ್ಲಾ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಮಲ್ಲಪ್ಪ ಸಂಕಿನ್ ಅವರಿಗೆ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಯಾದಗಿರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕಕ್ಕೆ ನಡೆದ ಚುನಾವಣೆಯಲ್ಲಿ ಜಿಲ್ಲಾಧ್ಯಕ್ಷರಾಗಿ ಎರಡನೇ ಬಾರಿಗೆ ಜಯಭೇರಿ ಬಾರಿಸಿರುವ ಮಲ್ಲಪ್ಪ ಸಂಕಿನ್ ಅವರನ್ನು ಯಾದಗಿರಿ ನಿಕಟಪೂರ್ವ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟರೆಡ್ಡಿ ಅಬ್ಬೆತುಮಕೂರ್, ಜಿಲ್ಲಾ ವಕ್ತಾರ ಹನುಮಂತ ಇಟಿಗಿ, ಮಾಧ್ಯಮ ಸಹ ಸಂಚಾಲಕ ಚಂದ್ರಶೇಖರ್ ಕಡೆಸೂರ್ ಅವರು ಸನ್ಮಾನಿಸಿ ಗೌರವಿಸಿದರು.

