ಯಾದಗಿರಿ ರಾಷ್ಟ್ರೀಯ ಈಡಿಗರ ಮಹಾಮಂಡಳಿಯ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ: ರಾಘವೇಂದ್ರ ಕಲಾಲ್
ನಾಗಾವಿ ಎಕ್ಸಪ್ರೆಸ್
ಯಾದಗಿರಿ: ರಾಷ್ಟ್ರೀಯ ಈಡಿಗರ ಮಹಾಮಂಡಳಿಯ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ರಾಘವೇಂದ್ರ ಕಲಾಲ್ ಸೈದಾಪುರ ತಿಳಿಸಿದ್ದಾರೆ.
ರಾಷ್ಟ್ರೀಯ ಈಡಿಗರ ಮಹಾಮಂಡಳಿಯ ರಾಜ್ಯಾಧ್ಯಕ್ಷ ಮಂಚೇಗೌಡ ಅವರಿಗೆ ರಾಜೀನಾಮೆ ಪತ್ರ ಬರೆದಿರುವ ಅವರು, ಕಳೆದ ಒಂದೂವರೆ ವರ್ಷದಿಂದ ಪೂಜ್ಯ ಶ್ರೀ ಪ್ರಣವಾನಂದ ಸ್ವಾಮೀಜಿ ಅವರು ನನಗೆ ಯಾದಗಿರಿ ಜಿಲ್ಲೆಯ ರಾಷ್ಟ್ರೀಯ ಈಡಿಗರ ಮಹಾಮಂಡಳಿಯ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿದರು. ಇಷ್ಟು ಚಿಕ್ಕ ವಯಸ್ಸಿನಲ್ಲಿ ನನಗೆ ದೊಡ್ಡ ಜವಾಬ್ದಾರಿ ನೀಡಿ ರಾಜ್ಯಾದ್ಯಂತ ನನಗೆ ಪರಿಚಯ ಮಾಡಿಸಿದ್ದ ಪೂಜ್ಯ ಗುರುಗಳಿಗೆ ಅಭಾರಿಯಾಗಿರುತೇನೆ. ಈ ಮೂಲಕ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ರಾಜ್ಯಾಧ್ಯಕ್ಷ ಮಂಚೇಗೌಡ ಬೆಂಗಳೂರು ಅವರಿಗೆ ತಿಳಿಸುವದೇನಂದರೆ ಇತ್ತೀಚಿಗೆ ನನ್ನ ವಯಕ್ತಿಕ ಕಾರಣಗಳಿಂದ ಸಂಘಟನೆಯಲ್ಲಿ ತೊಡಗಿಸಿಕೊಳಲು ಆಗುತ್ತಿಲ್ಲ ಆದ್ದರಿಂದ ತಮಗೆ ಕ್ಷಮೆ ಕೋರುತ್ತಾ ನಾನು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಅಧ್ಯಕ್ಷ ಸ್ಥಾನಕೆ ರಾಜೀನಾಮೆ ಕೊಡುತಿದ್ದೇನೆ ಈ ರಾಜೀನಾಮೆಯನ್ನು ಅಂಗೀಕರಿಸಬೇಕಾಗಿ ಮನವಿ ಮಾಡಿದ್ದಾರೆ.