ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ | ಭಾರತದ ಜಾಗತಿಕ ಪ್ರತಿಷ್ಠೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ನಾಯಕ ಮೋದಿ: ಮಹೇಶ್ ರೆಡ್ಡಿ ಮುದ್ನಾಳ
ನಾಗಾವಿ ಎಕ್ಸಪ್ರೆಸ್
ಯಾದಗಿರಿ: ಇಂದು ನಾವು ಕೇವಲ ಒಬ್ಬ ವ್ಯಕ್ತಿಯ ಸಾಧನೆಯನ್ನು ಸ್ಮರಿಸುತ್ತಿಲ್ಲ, ದೇಶದ ಅಭಿವೃದ್ಧಿ, ಸುಶಾಸನ, ರಾಷ್ಟ್ರೀಯ ಭದ್ರತೆ, ಬಡವರ ಕಲ್ಯಾಣ ಹಾಗೂ ಭಾರತದ ಜಾಗತಿಕ ಪ್ರತಿಷ್ಠೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ನಾಯಕನನ್ನು ಗೌರವಿಸುತ್ತಿದ್ದೇವೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯ ಮಹೇಶ್ ರೆಡ್ಡಿ ಮುದ್ನಾಳ ಹೇಳಿದರು.
ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ಅತಿ ಹೆಚ್ಚು ದಿನಗಳ ಕಾಲ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಮಂತ್ರಿ ಅವಿಸ್ಮರಣೀಯ ವಿಶಿಷ್ಟ ಗೌರವಕ್ಕೆ ಪಾತ್ರರಾದ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಗರದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಬುಧವಾರ ಹಮ್ಮಿಕೊಂಡ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕಳೆದ 12 ವರ್ಷಗಳಲ್ಲಿ ದೇಶವು ಮೂಲಸೌಕರ್ಯ, ಡಿಜಿಟಲ್ ಪರಿವರ್ತನೆ, ರೈತರ ಕಲ್ಯಾಣ, ಮಹಿಳಾ ಸಬಲೀಕರಣ, ಯುವಜನರ ಅವಕಾಶಗಳು ಹಾಗೂ ಸಾಮಾಜಿಕ ನ್ಯಾಯ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. “ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್” ಎಂಬ ಧ್ಯೇಯದೊಂದಿಗೆ ದೇಶವನ್ನು ಮುನ್ನಡೆಸುತ್ತಿರುವ ನಾಯಕತ್ವಕ್ಕೆ ನಾವೆಲ್ಲರೂ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ಹೇಳಿದರು.
ಈ ವಿಶೇಷ ಸಂದರ್ಭದಲ್ಲಿ ದೇವರಲ್ಲಿ ಪ್ರಾರ್ಥಿಸುವುದೇನೆಂದರೆ, ನರೇಂದ್ರ ಮೋದಿಜಿಯವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶಸೇವೆಯನ್ನು ಇನ್ನಷ್ಟು ಯಶಸ್ವಿಯಾಗಿ ಮುಂದುವರಿಸುವ ಶಕ್ತಿ ನೀಡಲಿ, ನಾವೆಲ್ಲರೂ ರಾಷ್ಟ್ರದ ಅಭಿವೃದ್ಧಿ ಮತ್ತು ಜನಸೇವೆಯ ಸಂಕಲ್ಪದೊಂದಿಗೆ ಅವರ ಮಾರ್ಗದರ್ಶನದಲ್ಲಿ ಮತ್ತಷ್ಟು ಶ್ರಮಿಸೋಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ ಪ್ರಧಾನಿ ನರೇಂದ್ರ ಮೋದಿ ಅವರ ಕರೋನಾ ಸಮಯದಲ್ಲಿ ಮಾಡಿರುವ ಸಾಧನೆ ಇಡೀ ದೇಶಕ್ಕೆ ಮಾದರಿಯಾಗಿದೆ, ಮೋದಿ ಕೋಟ್ಯಂತರ ಬ್ಯಾಂಕ್ ಅಕೌಂಟ್ ತೆಗೆಯುವ ಮುಖಾಂತರ ಜನದನ್ ಅಕೌಂಟ್ ತೆಗೆಯುವುದರಿಂದ ಫಲಾನುಭವಿಗಳಿಗೆ ಹಣ ದೊರೆಯುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡರಾದ ನಾಗರತ್ನ ಕುಪ್ಪಿ, ಸಿದ್ದಣ್ಣ ಗೌಡ ಮೊಳ್ಳಳ್ಳಿ, ಡಾ. ಶರಣಭೂಪಾಲರೆಡ್ಡಿ ನಾಯ್ಕಲ್, ವೆಂಕಟರೆಡ್ಡಿ ಅಬ್ಬೆತುಮಕೂರ್, ಪರಶುರಾಮ್ ಕುರುಕುಂದಿ, ಲಿಂಗಪ್ಪ ಹತ್ತಿಮನಿ, ರಾಜಶೇಖರ್ ಕಾಡಮ್ನೋರ್, ಕಂಡಪ್ಪ ದಾಸನ ಜಿಲ್ಲಾ ಬಿಜೆಪಿ ವಕ್ತಾರ ಹಣಮಂತ ಇಟಗಿ, ವಿಲಾಸ್ ಪಾಟೀಲ್, ರುದ್ರಗೌಡ ಪಾಟೀಲ್, ಸ್ವಾಮಿ ದೇವ್ ದಾಸನಕೇರಿ, ಮಲ್ಲಿಕಾರ್ಜುನ್ ಕಟ್ಟಿಮನಿ, ಕಾಶಿರಾಯ್ ಶಿವಣ್ಣ ವಿಶ್ವಕರ್ಮ, ರಮೇಶ ದೊಡ್ಡಮನಿ, ಪ್ರಭಾವತಿ ಕಲಾಲ್, ವಿಜಯಲಕ್ಷ್ಮಿ ನಾಯಕ್, ಶಕುಂತಲಾ, ಭೀಮಬಾಯಿ, ಚಂದ್ರಶೇಖರ ಕಡೆಸೂರ ಸೇರಿದಂತೆ ಅನೇಕ ಹಿರಿಯ ಮುಖಂಡರು, ಜಿಲ್ಲಾ ಪದಾಧಿಕಾರಿಗಳು, ಎಲ್ಲಾ ಮೋರ್ಚಾ ಪದಾಧಿಕಾರಿಗಳು, ಮಹಿಳಾ ಮುಖಂಡರು, ನಗರಸಭೆ ಸದಸ್ಯರು, ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

